ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳ ಬಂಧನ
Team Udayavani, Aug 11, 2022, 10:26 AM IST
ಪ್ರವೀಣ್ ನೆಟ್ಟಾರ್
ಪುತ್ತೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಪ್ರಮುಖ ಆರೋಪಿಗಳಾದ ಶಿಯಾಬ್, ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
ಪೊಲೀಸರು ಆರೋಪಿಗಳನ್ನು ಸುಳ್ಯದಿಂದ ಮಂಗಳೂರಿಗೆ ಕರೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಓರ್ವ ಆರೋಪಿ ಪುತ್ತೂರಿನ ತಾಲೂಕಿನ ಅಂಕತಡ್ಕ ನಿವಾಸಿಯಾಗಿದ್ದು, ಮತ್ತಿಬ್ಬರು ಸುಳ್ಯ ತಾಲೂಕಿನ ಎಲಿಮಲೆ, ಬೆಳ್ಳಾರೆಯವರು ಎಂದು ವರದಿಯಾಗಿದೆ.
ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ನೀಡುವ ಸಾಧ್ಯತೆಯಿದೆ.
ಇದನ್ನೂ ಓದಿ:ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ
ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳ ಸಂಖ್ಯೆ ಹತ್ತಕ್ಕೇರಿದೆ. ಇದುವರೆಗೆ ಹಲವು ಹಂತಗಳನ್ನು ಏಳು ಮಂದಿಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಹತ್ಯೆ ಮಾಡಿದ್ದ ಮೂವರು ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.