ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಫಿಟ್

Team Udayavani, Aug 11, 2022, 11:26 AM IST

Jamboo savari Elephants Weight Test: Ex-captain Arjuna is fittest

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ನಾಡಿಗೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಿದ್ದು, ಮಾಜಿ ಕ್ಯಾಪ್ಟನ್ ಅರ್ಜುನ ತೂಕದಲ್ಲಿ ಮುಂದಿದ್ದಾನೆ.

ಕಾಡಿನಿಂದ ನಾಡಿಗೆ ಆಗಮಿಸಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರ ಕಣ್ಮನ ಸೆಳೆಯುವ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ಗುರುವಾರ ಬೆಳಗ್ಗೆ ದನ್ವಂತರಿ ರಸ್ತೆಯಲ್ಲಿರುವ ಸಾಯಿರಾಮ್ ಆಂಡ್ ಕೋಂ ವೇ ಬಿಡ್ಜ್ ನಲ್ಲಿ ತೂಕದ ಪರೀಕ್ಷೆ ನಡೆಸಲಾಯಿತು. ಗಜಪಡೆಯ ಮಾಜಿ ಕ್ಯಾಪ್ಟನ್ ಅರ್ಜುನ 5725 ಕೆಜಿ ತೂಕವಿದ್ದು ಅತ್ಯಂತ ಬಲಶಾಲಿ ಆನೆಯಾಗಿದ್ದಾನೆ. ಇನ್ನು ಗೋಪಾಲಸ್ವಾಮಿ 5240 ಕೆಜಿ, ಧನಂಜಯ 4800 ಕೆಜಿ ತೂಕವಿದ್ದಾನೆ. ಚಿನ್ನದ ಅಂಬಾರಿ ಹೊರುವ ಹಾಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 4770 ಕೆ.ಜಿ ತೂಕವಿದ್ದು, ನಾಲ್ಕನೇ ಸ್ಥಾನ‌ ಪಡೆದುಕೊಂಡಿದ್ದಾನೆ.

ಇದನ್ನೂ ಓದಿ:ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ

ಮೊದಲ ಬಾರಿಗೆ ದಸರಾದಲ್ಲಿ ಭಾಗವಹಿಸುತ್ತಿರುವ ಮಹೇಂದ್ರ 4260 ಕೆಜಿ, ಭೀಮ 3950 ಕೆಜಿ ತೂಕವಿದ್ದಾನೆ. ಹೆಣ್ಣಾನೆಗಳಲ್ಲಿ ಕಾವೇರಿ 3110 ತೂಕವಿದ್ದು, ಚೈತ್ರ 3050, ಲಕ್ಷ್ಮೀ 2920 ಕೆಜಿ ತೂಕವಿದೆ.

ಸಾಮರ್ಥ್ಯ ಪರೀಕ್ಷೆ: ದಸರಾ ಮಹೋತ್ಸವದಲ್ಲಿ ಜಂಬೂಸವಾರಿ, ವಾದ್ಯದ ಗಾಡಿ ಸೇರಿದಂತೆ ಇನ್ನಿತರ ತೂಕದ ವಸ್ತುಗಳನ್ನು ಹೊತ್ತು ಸಾಗುವ ಆನೆಗಳನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡಗೊಳಿಸಲು ಅರಣ್ಯ ಇಲಾಖಾ ಅಧಿಕಾರಿಗಳು ದಿನನಿತ್ಯ ಪೌಷ್ಟಿಕಾಂಶಯುಕ್ತ ಆಹಾರ ನೀಡಿ ತಾಲಿಮು ನಡೆಸುತ್ತಾರೆ. ದೈಹಿಕವಾಗಿ ಸಬಲವಾಗಿದ್ದರೆ ಕಾರ್ಯಕ್ರಮಗಳು ಸುಗಮವಾಗಿ ಸಾಗುತ್ತವೆ. ಈ ಹಿನ್ನೆಲೆಯಲ್ಲಿ ಆನೆಗಳ ತೂಕ ಹಾಗೂ ಆರೋಗ್ಯದ ತಪಾಸಣೆ ನಡೆಸಿ ಸಮಸ್ಯೆಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಶಕ್ತಿ ಬರುವಂತೆ ತಯಾರು ಮಾಡಲಾಗುತ್ತದೆ. ಅದರಂತೆ ಆ.15ರ ನಂತರ ತಾಲೀಮು ಆರಂಭವಾಗಿದ್ದು ವಿಶೇಷ ಭಕ್ಷ್ಯವನ್ನೂ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಡಿಸಿಎಫ್ ಕರಿಕಾಳನ್ ಸೇರಿದಂತೆ ಮಾವುತರು ಹಾಜರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.