ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ
ಮಾಹಿತಿಯ ಪ್ರಚಾರವನ್ನು ಆಂದೋಲನಗಳ ಮೂಲಕ ಅನುಷ್ಠಾನಗೊಳಿಸುವುದು
Team Udayavani, Aug 11, 2022, 6:06 PM IST
ಬಳ್ಳಾರಿ: ಗ್ರಾಮೀಣ ಭಾಗದ ಎಲ್ಲ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಮೂಲಕ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಪಂನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಲಿಂಗಮೂರ್ತಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳ ಕಂದಾಯ ಗ್ರಾಮಗಳಲ್ಲಿ ಹರ್ ಘರ್ ಜಲೋತ್ಸವ ಆಚರಿಸಲು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಯಾದ “ಆಟೋ ಪ್ರಚಾರ’ ವಾಹನಕ್ಕೆ ಜಿಪಂ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ನೀರು ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಟೋ ಮೂಲಕ ಜಲ ಜೀವನ್ ಮಿಷನ್ ಯೋಜನೆಯ ಮಾಹಿತಿಯ ಪ್ರಚಾರವನ್ನು ಆಂದೋಲನಗಳ ಮೂಲಕ ಅನುಷ್ಠಾನಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳು ಗ್ರಾಮೀಣ ಭಾಗದ ಜನರಿಗೆ ಅವಶ್ಯಕವಾಗಿವೆ. ಕಳೆದ ಸಾಲಿನಲ್ಲಿ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿ
ಮುಕ್ತಾಯವಾಗಿರುವ ಗ್ರಾಮಗಳಲ್ಲಿ ಹರ್ ಘರ್ ಜಲ್ ಗ್ರಾಮ ಎಂತಲೂ ಮತ್ತು ಗ್ರಾಮ ಪಂಚಾಯಿತಿಗಳನ್ನು ಗ್ರಾಮಸಭೆಯ ಮುಂಖಾತರ ಘೋಷಿಸಲಾಗುತ್ತಿದೆ
ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಎಂಜನಿಯರ್ಗಳು, ಸ್ವತ್ಛ ಭಾರತ್ ಮಿಷನ್ ನ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸಂಯೋಜಕರು, ಅನುಷ್ಠಾನ ನೆರವು ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.