ಕಬ್ಬು ಬೆಳೆಗೆ ಬೆಲೆ ನಿಗದಿ: ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ
Team Udayavani, Aug 12, 2022, 2:14 PM IST
ದಾವಣಗೆರೆ: ಕೇಂದ್ರ ಸರ್ಕಾರ ಕಬ್ಬು ಬೆಳೆಗೆ ನಿಗದಿಪಡಿಸಿರುವ ನ್ಯಾಯೋಚಿತ ಹಾಗೂ ಲಾಭದಾಯಕ ಬೆಲೆ (ಎಫ್.ಆರ್.ಪಿ.)ಅವೈಜ್ಞಾನಿಕವಾಗಿದ್ದು ಇದನ್ನು ಪುನರ್ ಪರಿಶೀಲಿಸಬೇಕೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ನಗರದ ಜಿ.ಪಂ. ಕಚೇರಿ ಎದುರು ಮುಕ್ಕಾಲು ತಾಸು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ರೈತರು ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಮುಕ್ಕಾಲು ತಾಸು ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲವು ವಾಹನಗಳ ಸಂಚಾರಕ್ಕೆ ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿದರೂ ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.
ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಲು ಪೊಲೀಸರು ಎಷ್ಟೇ ಮನವೊಲಿಸಿದರೂ ಜಗ್ಗದ ರೈತರು, ಕೊನೆ ಪಕ್ಷ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಆಗಮಿಸಿ ಮನವಿಪತ್ರ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು. ಪೊಲೀಸರು ಈ ಕುರಿತು ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿಯವರು ರೈತರ ಮನವಿ ಸ್ವೀಕರಿಸಿ, ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಕಳುಹಿಸುವುದಾಗಿ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ರೈತರು ಹೆದ್ದಾರಿ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.