ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
Team Udayavani, Aug 13, 2022, 8:12 AM IST
ನ್ಯೂಯಾರ್ಕ್: ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಉಪನ್ಯಾಸ ಕೊಡುವ ವೇಳೆ ಚಾಕುವಿನಿಂದ ಹಲ್ಲೆಗೊಳಗಾದ ಲೇಖಕ ಸಲ್ಮಾನ್ ರಶ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುತ್ತಿಗೆ, ಕಿಬ್ಬೊಟ್ಟೆಗೆ ಗಂಭೀರ ಗಾಯಗಳಾಗಿದೆ ಎಂದು ಹೇಳಲಾಗಿದೆ.
ವ್ಯಕ್ತಿಯಿಂದ ಇರಿತಕ್ಕೊಳಗಾಗಿ ಕುಸಿದು ಬಿದ್ದ ರಶ್ದಿ ಅವರನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ವೆಂಟಿಲೇಟರ್ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿವೆ ಮತ್ತು ಅವರ ಯಕೃತ್ತಿಗೆ ಹಾನಿಯಾಗಿದೆ ಅಲ್ಲದೆ ದೃಷ್ಟಿ ಕಳೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಘಟನೆಯ ಬೆನ್ನಲ್ಲೇ ದುಷ್ಕರ್ವಿುಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ದಾಳಿಕೋರ ಯಾರು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ನ್ಯೂಜರ್ಸಿ ಮೂಲದ ಹದಿ ಮತಾರ್ (24) ಎಂದು ಗುರುತಿಸಲಾಗಿದೆ. ದಾಳಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.