ಆ. 18ರಿಂದ ಕರಾವಳಿಯ 15 ಥಿಯೇಟರ್‌ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ
Team Udayavani, Aug 15, 2022, 7:45 AM IST
ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್‌ನಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹು ನಿರೀಕ್ಷೆಯ ತುಳು ಸಿನೆಮಾ “ಅಬತರ’ ಆ. 18ರಂದು ಕರಾವಳಿ ಜಿಲ್ಲೆಯ 15 ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ ಎಂದು ನಿರ್ದೇಶಕ-ನಟ ಅರ್ಜುನ್ ಕಾಪಿಕಾಡ್ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನೆಪೊಲಿಸ್, ಪಿವಿಆರ್, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನೆಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನೆಮಾಸ್, ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ ಎಂದರು.
ನಿಖೀಲ್ ಸಾಲ್ಯಾನ್ ನಿರ್ಮಾಪಕ, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿರುವ ಈ ಸಿನೆಮಾವನ್ನು ಮುಂದಿನ ದಿನಗಳಲ್ಲಿ ಮುಂಬಯಿ, ಬೆಂಗಳೂರು, ಕಾಸರಗೋಡು, ಮುಳ್ಳೇರಿಯ, ಸಕಲೇಶಪುರ, ಶುಂಠಿಕೊಪ್ಪ, ತೀರ್ಥಹಳ್ಳಿ, ಕುಂದಾಪುರ, ಶಿವಮೊಗ್ಗ ಮುಂತಾದೆಡೆ ಬಿಡುಗಡೆಗೊಳ್ಳಲಿದೆ.
ಆ. 16, 17ರಂದು 2 ಜಿಲ್ಲೆಯ ವಿವಿಧ ಅನಾಥಶ್ರಮದಲ್ಲಿರುವ ಮಕ್ಕಳಿಗೆ ಸಿನೆಮಾವನ್ನು ಉಚಿತವಾಗಿ ಪ್ರದರ್ಶಿಸಲಾಗುವುದು ಎಂದರು.
ನಟ ನವೀನ್ ಡಿ. ಪಡೀಲ್ ಮಾತನಾಡಿ, ಪ್ರೇಕ್ಷಕರು ಇಷ್ಟ ಪಡುವಂತೆ ಇದು ಸಂಪೂರ್ಣ ಹಾಸ್ಯ ಚಿತ್ರದ ಪ್ಯಾಕೇಜ್. ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಾಗಿದೆ. ಡಾ| ದೇವದಾಸ್ ಕಾಪಿಕಾಡ್ ಕಥೆ ರಚಿಸಿದ್ದಾರೆ. ಅರ್ಜುನ್ ಕಾಪಿಕಾಡ್’ ಅಭಿನಯದ ಜತೆಗೆ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ.
ಡಾ| ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ, ಶನಿಲ್ ಗುರು, ಚೇತನ್ ರೈ ಮಾಣಿ, ಲಕ್ಷ್ಮೀಶ್, ಸುನಿಲ್ ಚಿತ್ರಾಪುರ ಮತ್ತು ನಾಯಕ ನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ.
ಛಾಯಾಚಿತ್ರಗ್ರಾಹಕರಾಗಿ ವಿಷ್ಣುಪ್ರಸಾದ್, ಜೇಕೋಬ್, ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ ಕೆಲಸ ಮಾಡಿದ್ದಾರೆ ಎಂದರು.
ಶರ್ಮಿಲಾ ಡಿ. ಕಾಪಿಕಾಡ್, ಸಾಯಿಕೃಷ್ಣ, ನಿಖೀಲ್ ಸಾಲ್ಯಾನ್, ವಿರಾಜ್ ಅತ್ತಾವರ, ಶನಿಲ್ ಗುರು, ಗಾನ ಭಟ್, ಕ್ರಿಸ್ಟಿನಾ, ಲಕ್ಷ್ಮೀಶ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.