ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆ


Team Udayavani, Aug 15, 2022, 7:25 AM IST

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆ

ಪುತ್ತೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆಯು ಏರಿಕೆಯ ನಾಗಲೋಟ ಮುಂದುವರಿಸಿದ್ದು ಹೊಸ ಅಡಿಕೆ ಧಾರಣೆ ಆಗಸ್ಟ್‌ ಅಂತ್ಯದೊಳಗೆ ಕೆ.ಜಿ.ಗೆ 500 ರೂ. ತಲುಪುವ ನಿರೀಕ್ಷೆ ಮೂಡಿದೆ. ಜತೆಗೆ ಹಳೆ ಅಡಿಕೆಯೂ ಕಳೆದೆರಡು ದಿನಗಳಲ್ಲಿ ಏರಿಕೆ ಕಾಣುತ್ತಿದ್ದು, 600ರ ಗಡಿ ತಲುಪುವ ನಿರೀಕ್ಷೆ ಮೂಡಿದೆ.

ಕಳೆದ ಕೆಲವು ದಿನಗಳಿಂದ ಕ್ಯಾಂಪ್ಕೋ ಧಾರಣೆಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿನ ಧಾರಣೆ ಏರಿಕೆ ಹಂತದಲ್ಲಿದ್ದು ಎರಡೂ ಕಡೆ ದರ ಏರಿಕೆಯ ಸ್ಪರ್ಧೆ ಏರ್ಪಟ್ಟಿದೆ. ಹೊಸ ಅಡಿಕೆಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಧಾರಣೆ ಇನ್ನಷ್ಟು ಏರುವ ನಿರೀಕ್ಷೆಯಲ್ಲಿ ಬೆಳೆಗಾರರು ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.

ದಾಖಲೆಯ ಧಾರಣೆ
2022 ಆ. 13ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ 460 ರೂ., ಹಳೆ ಅಡಿಕೆಗೆ 560 ರೂ. ಧಾರಣೆ ಇತ್ತು. ಆ. 9ರಂದು ಹೊಸ ಅಡಿಕೆಗೆ 455 ರೂ., ಹಳೆ ಅಡಿಕೆಗೆ 560 ರೂ. ಇತ್ತು. ಆ. 13ಕ್ಕೆ ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಹೊಸದಕ್ಕೆ ಕೆ.ಜಿ.ಗೆ 472-74 ರೂ., ಹಳೆಯದಕ್ಕೆ 575-77 ರೂ. ತನಕ ಇತ್ತು. ಆ. 9ರಂದು ಹೊಸದಕ್ಕೆ 465 ರೂ., ಹಳೆಯದಕ್ಕೆ 572 ರೂ. ಇತ್ತು. ಅಂದರೆ ಹೊರ ಮಾರುಕಟ್ಟೆಯಲ್ಲಿ ಹೊಸದಕ್ಕೆ 7 ರೂ. ತನಕ ಏರಿಕೆ ಕಂಡಿದೆ. ಕೆಲವು ವರ್ಷಗಳಿಗೆ ಹೋಲಿಸಿದರೆ ಇದು ಬೆಳೆಗಾರರ ಪಾಲಿಗೆ ದೊರೆಯುತ್ತಿರುವ ಸಾರ್ವಕಾಲಿಕ ದಾಖಲೆಯ ಧಾರಣೆ ಕೂಡ ಆಗಿದೆ.

ಹಬ್ಬದ ಪರಿಣಾಮ
ಆಗಸ್ಟ್‌ನಲ್ಲಿ ಸಾಲು ಸಾಲು ಹಬ್ಬ ಬರಲಿದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆ ಆಧಾರಿತ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಇದು ಅಡಿಕೆಗೆ ಬೇಡಿಕೆ ಹೆಚ್ಚಾಗಿ ಧಾರಣೆ ಏರಿಕೆಯ ಕಾರಣಗಳಲ್ಲಿ ಪ್ರಮುಖ ಎಂದು ಅಂದಾಜಿಸಲಾಗಿದೆ. ಅಡಿಕೆ ಉತ್ಪಾದನೆ ಕುಸಿತ ಮೊದಲಾದವು ಕೂಡ ಧಾರಣೆಯ ಏರಿಕೆಗೆ ನೆರವಾಗುತ್ತಿದೆ ಎನ್ನುತ್ತಿದೆ ಮಾರುಕಟ್ಟೆ ಮೂಲಗಳು.

ದಾಸ್ತಾನು ಕೊರತೆ
ಗುಟ್ಕಾ ತಯಾರಿಕೆಗೆ ಕೆಂಪಡಿಕೆಗಿಂತ ಚಾಲಿಯೇ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತಿರುವ ಕಾರಣ ಚಾಲಿಯ ಕೊರತೆ ಉಂಟಾಗಿದೆ. ಕಳೆದ ಕೆಲವು ವರ್ಷಗಳಿಂದ ಅಡಿಕೆ ಉತ್ಪಾದನೆ ಕುಸಿಯುತ್ತಿದ್ದು ನಿರೀಕ್ಷಿತ ಫಸಲು ದೊರೆಯುತ್ತಿಲ್ಲ. ಕೊಳೆರೋಗ, ಪ್ರಾಕೃತಿಕ ವಿಕೋಪ, ಹಳದಿ ರೋಗ ಇತ್ಯಾದಿ ಕಾರಣಗಳಿಂದ ಅಡಿಕೆ ಬೆಳೆಗಾರು ಇಳುವರಿ ನಷ್ಟ ಅನುಭವಿಸುತ್ತಿದ್ದು ಮಾರುಕಟ್ಟೆಗೆ ನಿರೀಕ್ಷಿತ ಪೂರೈಕೆ ಆಗುತ್ತಿಲ್ಲ. ಈ ಬಾರಿಯೂ ಕೊಳೆರೋಗ ವ್ಯಾಪಕವಾಗಿದ್ದು ಮುಂದಿನ ಬಾರಿ ಫಸಲು ನಷ್ಟವಾಗಲಿದೆ. ಈ ಮಧ್ಯೆ ಉತ್ತರ ಭಾರತದ ರಾಜ್ಯಗಳಲ್ಲಿ ಅಡಿಕೆ ಆಧಾರಿತ ಉತ್ಪನಗಳ ತಯಾರಿ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕಷ್ಟು ಚಾಲಿ ಅಡಿಕೆ ಪೂರೈಕೆ ಆಗುತ್ತಿಲ್ಲ. ಅಲ್ಲಿ ದಾಸ್ತಾನು ಕೊರತೆ ಉಂಟಾಗಿದೆ. ಆದ್ದರಿಂದ ವರ್ತಕರು ಚಾಲಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿಗೆ ಮುಗಿಬಿದ್ದಿದ್ದಾರೆ ಎನ್ನುತ್ತಿವೆ ಮಾರುಕಟ್ಟೆ ಮೂಲಗಳು.

ಉತ್ತರ ಭಾರತದ ರಾಜ್ಯಗಳಿಂದ ಮಂಗಳೂರು ಚಾಲಿ ಅಡಿಕೆಗೆ ಸಾಕಷ್ಟು ಬೇಡಿಕೆ ಇದೆ. ಹಬ್ಬದ ಸಂದರ್ಭ ಚಾಲಿ ಅಡಿಕೆ ಆಧಾರಿತ ಉತ್ಪನ್ನಗಳಿಗೆ ಇನ್ನಷ್ಟು ಬೇಡಿಕೆ ಸೃಷ್ಟಿಯಾಗಲಿದೆ. ಪ್ರಸ್ತುತ ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆ ಇಲ್ಲದಿರುವುದರಿಂದ ಹೊಸ ಅಡಿಕೆ ಧಾರಣೆ 500 ರೂ. ತನಕ ಏರುವ ಸಾಧ್ಯತೆ ಇದ್ದು ಬೆಳೆಗಾರ ನಿರೀಕ್ಷೆಯಲ್ಲಿದ್ದಾನೆ.
– ಮಹೇಶ್‌ ಎಂ,
ಅಡಿಕೆ ಬೆಳೆಗಾರ, ಪುತ್ತೂರು

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.