ಕೊಟ್ಟಿಗೆಹಾರದಲ್ಲಿ ಆನೆ ದಾಳಿಗೆ ರೈತ ಬಲಿ: ಮೃತದೇಹವನ್ನ ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ
Team Udayavani, Aug 15, 2022, 12:23 PM IST
ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನ 52 ವರ್ಷದ ಆನಂದ್ ದೇವಾಡಿಗ ಎಂದು ಗುರುತಿಸಲಾಗಿದೆ.
ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ.
ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.
ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.
ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ : ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.