ಆ.17 ರಂದು ನಾಳೆ ಮಹಾಲಿಂಗಪುರ ಬಂದ್: ಸಾಮೂಹಿಕ ನಾಯಕತ್ವದಡಿ ಹೋರಾಟ


Team Udayavani, Aug 15, 2022, 5:57 PM IST

tdy-11

ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17 ರಂದು ಮಹಾಲಿಂಗಪುರ ಬಂದ್‌ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲ್ಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.

ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15 ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ ಆ.17ರಂದು ಮಹಾಲಿಂಗಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ಈಗಾಗಲೇ ತಿಳಿಸಲಾಗಿತ್ತು. ಇನ್ನುವರೆಗೂ ಸರ್ಕಾರ ಮಹಾಲಿಂಗಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿಲ್ಲ. ಹೀಗಾಗಿ ಆ.17ರಂದು ಮಹಾಲಿಂಗಪುರ ಬಂದ್ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದರು.

ಆ.17ರಂದು ಮುಂಜಾನೆ 9 ಗಂಟೆಗೆ ಬಸವೇಶ್ವರ ವೃತ್ತದಿಂದ ನಡುಚೌಕಿ, ಜವಳಿ ಬಜಾರ್, ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ಚನ್ನಮ್ಮ ವೃತ್ತದಲ್ಲಿ ಸಮಾಪ್ತಿಗೊಳಿಸಿ ಹೋರಾಟ ವೇದಿಕೆಯಲ್ಲಿ ಸಭೆ ನಡೆಸಲಾಗುವುದು.

ಜಿಲ್ಲಾಧಿಕಾರಿಗೆ ಮನವಿ : ಸಭೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ  ಸಲ್ಲಿಸಲಾಗುವುದು. ಜಿಲ್ಲಾಧಿಕಾರಿಗಳು ಹೋರಾಟ ವೇದಿಕೆಗೆ ಆಗಮಿಸಿ, 125 ದಿನಗಳ ಕಾಲ ನಡೆದ ತಾಲೂಕು ಹೋರಾಟದ ಕುರಿತು ಸರ್ಕಾರಕ್ಕೆ ಸಲ್ಲಿಸಿದ ವರದಿಯನ್ನು ಬಹಿರಂಗಪಡಿಸಬೇಕು.ಒಂದು ವೇಳೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರದಿದ್ದರೆ ಅವರು ಬರುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.

ಮಹಾಲಿಂಗಪುರ ಬಂದ್ ಹಿನ್ನೆಲೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು. ಪಟ್ಟಣದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ, ಪಕ್ಷಾತೀತವಾಗಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಸನಗೌಡ ಪಾಟೀಲ, ಯಲ್ಲನಗೌಡ ಪಾಟೀಲ, ಜಾವೇದ ಬಾಗವಾನ, ನಿಂಗಪ್ಪ ಬಾಳಿಕಾಯಿ, ಸಂಗಪ್ಪ ಹಲ್ಲಿ, ಮಹಾಲಿಂಗಪ್ಪ ಕುಳ್ಳೊಳ್ಳಿ, ಬಿ.ಎಂ.ಯಾದವಾಡ, ಸುನೀಲಗೌಡ ಪಾಟೀಲ, ಅರ್ಜುನ ಹಲಗಿಗೌಡರ, ಗಂಗಾಧರ ಮೇಟಿ, ಮಹಾದೇವ ಮಾರಾಪುರ, ಪರಮಾನಂದ ಸಂಕ್ರಟ್ಟಿ, ಈರಪ್ಪ ದಿನ್ನಿಮನಿ, ವೀರೇಶ ಆಸಂಗಿ, ಹಣಮಂತ ಜಮಾದಾರ, ಸಿದ್ದಪ್ಪ ಶಿರೋಳ, ಶಿವಲಿಂಗ ಟಿರಕಿ, ಪರಪ್ಪ ಸತ್ತಿಗೇರಿ, ವಿಠ್ಠಲ ಕುಳಲಿ, ಮಹಾಲಿಂಗ ಮಾಳಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.