ಕೇಂದ್ರ ಸರ್ಕಾರದ ದೂರದೃಷ್ಟಿಯಿಂದ ಆರ್ಥಿಕ ಸದೃಢತೆ
Team Udayavani, Aug 16, 2022, 4:09 PM IST
ಕಲಬುರಗಿ: ಕಳೆದೆರಡು ವರ್ಷಗಳಿಂದ ನೆರೆಯ ರಾಷ್ಟ್ರಗಳಲ್ಲದೇ ವಿಶ್ವದ ಅನೇಕ ದೇಶಗಳು ಆರ್ಥಿಕ ಹೊಡೆತ ಅನುಭವಿಸಿದ್ದರೆ ಭಾರತ ದೇಶ ಮಾತ್ರ ಆರ್ಥಿಕವಾಗಿ ಹೆಚ್ಚಿನ ನಷ್ಟ ಹೊಂದದೇ ಮುನ್ನೆಡೆಯುತ್ತಿರುವುದು ಕೇಂದ್ರದ ಸರ್ಕಾರದ ದೂರದೃಷ್ಟಿ ಯೋಜನೆಗಳು ಹಾಗೂ ನಿರ್ಧಾರಗಳು ಕಾರಣವಾಗಿವೆ ಎಂದು ಬಿಜೆಪಿ ಮುಖಂಡ ಶಿವಕಾಂತ ಮಹಾಜನ್ ತಿಳಿಸಿದರು.
ನಗರದ ಬಂಬು ಬಜಾರ ನೇತಾಜಿ ನಗರದ ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಿದ್ದೇಶ್ವರ ಕಾಲೇಜುದಲ್ಲಿ ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಹಾಗೂ ಪೌರಕಾರ್ಮಿಕರಿಗೆ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.
ವಿಶ್ವವೇ ಇಂದು ಭಾರತದತ್ತ ನೋಡುವಂತಾಗಿದೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟನಡೆ ಹಾಗೂ ಚಾಣಾಕ್ಷತನದ ನಿರ್ಧಾರಗಳೇ ಕಾರಣವಾಗಿರುವುದು ಎಲ್ಲರಿಗೂ ತಿಳಿದ ವಿಷಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಯೊಂದಿಗೆ ಭಾರತ ದೇಶ ಮತ್ತಷ್ಟು ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿವರಣೆ ನೀಡಿದರು.
ಶಾಲೆಯ ಅಧ್ಯಕ್ಷರಾದ ಗೋಪಾಲರಾವ್ ಹಿರನಾಗಾಂವ, ಬಡಾವಣೆಯ ಹಿರಿಯ ಮುಖಂಡರು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.