ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ನಕಲಿ ಚಿನ್ನಾಭರಣ ಕೊಟ್ಟು ವಂಚನೆ: ಇಬ್ಬರ ಬಂಧನ
Team Udayavani, Aug 16, 2022, 5:39 PM IST
ಪಣಜಿ: ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ಪಣಜಿಯಲ್ಲಿ ಆಭರಣ ವ್ಯಾಪಾರಿಯೊಬ್ಬರಿಗೆ ವಂಚಿಸಿದ್ದ ಗುಜರಾತ್ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ 11.30 ರ ಸುಮಾರಿಗೆ ಪಣಜಿಯ ಎಂ.ಜಿ ರಸ್ತೆಯಲ್ಲಿರುವ ತನ್ನ ಅಂಗಡಿಗೆ ಅಪರಿಚಿತ ಮಹಿಳೆ ಮತ್ತು ಇಬ್ಬರು ಪುರುಷರು ಪ್ರವೇಶಿಸಿದ್ದಾರೆ. ಗ್ರಾಹಕರಂತೆ ಬಿಂಬಿಸಿಕೊಂಡ ಮೂವರು ಸೇಲ್ಸ್ ಎಕ್ಸಿಕ್ಯೂಟಿವ್‍ಗೆ ತಮ್ಮ ಹಳೆಯ ಚಿನ್ನವನ್ನು ಮಾರಾಟ ಮಾಡಲು ಬಯಸುವುದಾಗಿ ಹೇಳಿ 12 ಲಕ್ಷ ರೂಪಾಯಿ ಮೌಲ್ಯದ ಹೊಸ ಚಿನ್ನಾಭರಣಗಳೊಂದಿಗೆ ಅಂಗಡಿಯಿಂದ ಹೊರ ಹೋದರು. ಬಳಿಕ ಹಳೆ ಚಿನ್ನಾಭರಣ ಕರಗಿಸಿ ಚಿನ್ನಾಭರಣ ವ್ಯಾಪಾರಿಗಳು ಪರಿಶೀಲನೆ ನಡೆಸಿದಾಗ ನಕಲಿ ಚಿನ್ನಾಭರಣ ಎಂಬುದು ಪತ್ತೆಯಾಗಿದೆ. ತಾನು ಮೋಸ ಹೋಗಿರುವುದಾಗಿ ಜ್ಯುವೆಲರ್ ನಿಕುಂಜ್ ಗುಪ್ತಾ ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮಾಹಿತಿ ಕಲೆಹಾಕಿದ್ದು, ಆರೋಪಿಗಳಾದ ಕೇಶುಭಾಯಿ ಪರ್ಮಾರ್ (32), ಮುಕೇಶ್‍ಭಾಯ್ ಪರ್ಮಾರ್ (26) ಗುಜರಾತ್‍ನ ಪೋರ್ ಬಂದರ್ ಮೂಲದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಣಜಿ ಪೊಲೀಸ್ ಇನ್ಸ್‍ಪೆಕ್ಟರ್ ನಿಖಿಲ್ ಪಾಲೇಕರ್ ನೇತೃತ್ವದ ತಂಡ ಸುದೇಶ್ ನಾಯ್ಕ್, ರವರ ನೇತೃತ್ವದಲ್ಲಿ ಈ ಪ್ರಕರಣವನ್ನು ಬೇಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.