ಇಡೀ ದೇಶದಲ್ಲೇ ಬಸವರಾಜ ಬೊಮ್ಮಾಯಿ ಅಸಮರ್ಥ ಮುಖ್ಯಮಂತ್ರಿ: ಸುರ್ಜೇವಾಲಾ
Team Udayavani, Aug 16, 2022, 9:22 PM IST
ಬೆಂಗಳೂರು: ಇಡೀ ದೇಶದಲ್ಲೇ ಬಸವರಾಜ ಬೊಮ್ಮಾಯಿ ಅಸಮರ್ಥ ಮುಖ್ಯಮಂತ್ರಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಇಡೀ ದೇಶದಲ್ಲಿ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದರೆ ಅದು ಬಸವರಾಜ ಬೊಮ್ಮಾಯಿ ಎಂಬುದು ಸಾಬೀತಾಗಿದೆ ಎಂದು ಹೇಳಿದರು.
ಮಂಗಳೂರಿನಲ್ಲಿನ ಪ್ರಕರಣ, ಶಿವಮೊಗ್ಗದ ಬೆಳವಣಿಗೆಗೆಳು ಮುಖ್ಯಮಂತ್ರಿಗಳ ವೈಫಲ್ಯ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ. ಇದಕ್ಕೆಲ್ಲ ಕಾರಣವಾಗಿರುವ ಸಮಾಜ ಘಾತುಕ ಶಕ್ತಿಗಳಿಗೆ ಬಿಜೆಪಿಯೇ ಪ್ರೋತ್ಸಾಹ ನೀಡುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶೇ.40 ಪರ್ಸೆಂಟ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಿಡಿಗೇಡಿಗಳು, ಸಮಾಜಘಾತುಕ ಸಂಘಟನೆಗಳು ಜನರನ್ನು ಹಾಡಹಗಲೇ ಹತ್ಯೆ ಮಾಡುತ್ತಿದ್ದಾರೆ. ಬಿಜೆಪಿಯ ಕಾರ್ಯಕರ್ತರೇ ಹತ್ಯೆಯಾಗುತ್ತಿದ್ದರೂ ಈ ಸರ್ಕಾರ ವೈಮರೆತು ಕೂತಿದೆ. ಆ ಮೂಲಕ ಜನರಿಗೆ ದ್ರೋಹ ಬಗೆಯುತ್ತಿದೆ. ಸಮಾಜವನ್ನು ಒಡೆಯಲು ಬಿಜೆಪಿ ಪ್ರಾಯೋಜಿತ ಷಡ್ಯಂತ್ರಗಳ ವಿರುದ್ಧ ಹೋರಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಪಣ ತೊಟ್ಟಿದ್ದೇವೆ. ಈ ಸರ್ಕಾರವನ್ನು ಕಿತ್ತೂಗೆಯುವವರೆಗೂ ನಾವು ವಿರಮಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.