ಪೊಲೀಸ್ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪೌಲ್ ಜಾಮೀನು ಅರ್ಜಿ ತಿರಸ್ಕೃತ
Team Udayavani, Aug 16, 2022, 10:35 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಹಾಗೂ ಅಮಾನತುಗೊಂಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ.
ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಯಶವಂತ ಕುಮಾರ್ ಅರ್ಜಿ ತಿರಸ್ಕರಿಸಿದ್ದಾರೆ. ಪಿಎಸ್ಐ ಹಗರಣದಲ್ಲಿ ಅಮೃತ್ ಪೌಲ್ 35ನೇ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ಪೌಲ್ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜತೆಗೆ ಹಗರಣಕ್ಕೆ ಸಂಬಂಧಿಸಿದ ಸಿಸಿ ಕೆಮರಾ ದೃಶ್ಯಗಳನ್ನು ವಿಶ್ಲೇಷಣೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಸಿಐಡಿ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದಿಸಿದ್ದರು.
ಹೈಕೋರ್ಟ್ ಮೊರೆ-ಸಾಧ್ಯತೆ
ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿತಿರಸ್ಕರಿಸಿ ಆದೇಶಿಸಿದೆ. ಕಳೆದ ಜುಲೈ 25ರಂದು 1ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಇಲ್ಲಿಯೂ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.