ದತ್ತ ದೇವಸ್ಥಾನದ ಪ್ರಕರಣ ಸಿಬಿಐಗೆ ವಹಿಸಿ: ನಾಟಿಕಾರ
Team Udayavani, Aug 17, 2022, 2:59 PM IST
ಅಫಜಲಪುರ: ತಾಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿರುವ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಅರ್ಚಕರು ನಕಲಿ ವೆಬ್ ಸೈಟ್ ಸೃಷ್ಟಿಸಿ ಹಣ ಲೂಟಿ ಮಾಡಿರುವ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್ ಮುಖಂಡ ಶಿವಕುಮಾರ ನಾಟಿಕಾರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಪ್ರಕರಣ ದಾಖಲಿಸುವಂತೆ ದೇವಸ್ಥಾನ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ನಾಮದೇವ ಅವರು ತಡವಾಗಿ ಪ್ರಕರಣ ದಾಖಲಿಸಿದ್ದಾರೆಂದು ಆರೋಪಿಸಿದರು.
ಆರೋಪಿಗಳ ಬಂಧನವಾಗದೆ ಹೊರ ಗಿದ್ದುಕೊಂಡೇ ನಿರೀಕ್ಷಣಾ ಜಾಮೀನು ಪಡೆದು ಆರಾಮವಾಗಿದ್ದಾರೆ. ದೂರು ದಾಖಲಿಸುವಾಗ ಅರ್ಚಕರ ಹೆಸರು, ಜತೆಗೆ ಎಷ್ಟು ಹಣ ಲೂಟಿಯಾಗಿದೆ ಎಂಬುದನ್ನು ಸೇರಿಸಬೇಕಿತ್ತು ಎಂದು ಆಗ್ರಹಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ, ಮುಖಂಡರಾದ ಶ್ರೀಕಾಂತ ದಿವಾಣಜಿ, ಶ್ರೀಶೈಲಗೌಡ ಪಾಟೀಲ್, ಮಹಾಂತಗೌಡ ಪಾಟೀಲ್, ನವೀನ್ ಜಮಾದಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.