ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
Team Udayavani, Aug 18, 2022, 12:35 PM IST
ಕುರುಗೋಡು : ಸಮೀಪದ ಬಸಾಪುರ ಗ್ರಾಮದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ಕೆಳ ಮಟ್ಟದ ಕಾಲುವೆಯಲ್ಲಿ ಗೆಳೆಯನೊಂದಿಗೆ ಈಜಲು ಹೋಗಿದ್ದ ವ್ಯಕ್ತಿ ನೀರಲ್ಲಿ ಮುಳುಗಿದ ಘಟನೆ ಕುರುಗೋಡು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೀರಲ್ಲಿ ನಾಪತ್ತೆಯಾದ ವ್ಯಕ್ತಿ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನಿರುಗುಂದ ಗ್ರಾಮದ ಆದರ್ಶ (32) ಎಂದು ಗುರುತಿಸಲಾಗಿದೆ.
ಅವರು ಬೆಂಗಳೂರಿನ ಐಟಿಸಿ ಇನ್ಫೋಟೆಕ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುದ್ದರು, ವಿಜಯಪುರದ ಗೋಳಗುಮ್ಮಟ ನೋಡಿಕೊಂಡು ಕುರುಗೋಡಲ್ಲಿ ಇದ್ದ ಗೆಳೆಯ ಭಾಷಾ ಮನೆಗೆ ಬಂದಿದ್ದ ಆದರ್ಶ ಬುಧವಾರ ಬೆಳಿಗ್ಗೆ ಈಜಲೆಂದು ಕಾಲುವೆಗೆ ಜಿಗಿದಿದ್ದು, ಮೇಲೆ ಬರಲೇ ಇಲ್ಲ. ಗೆಳೆಯ ಭಾಷಾ ಹುಡುಕಾಡಿ ಸಿಗದೇ ಇದ್ದಾಗ ಭಯಭಿತನಾಗಿ ಸ್ಥಳೀಯ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾನೆ.
ಇದನ್ನೂ ಓದಿ : ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಸುದ್ದಿ ತಿಳಿದಾಕ್ಷಣ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಶೋಧ ಕಾರ್ಯ ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಡಿದರು ವ್ಯಕ್ತಿ ಪತ್ತೆಯಾಗಿಲ್ಲ.
ಗುರುವಾರ ಎರಡನೇ ದಿನಕ್ಕೂ ಶೋಧ ಕಾರ್ಯ ಬೆಳಿಗ್ಗೆ 7 ಗಂಟೆಯಿಂದ ಮುಂದುವರೆದಿದೆ. ಬಸಾಪುರ ಕಾಲುವೆ ಸೇತುವೆಯಿಂದ ಹಿಡಿದು ಸಿರುಗುಪ್ಪ ರಸ್ತೆ ವರೆಗೂ ಕಾರ್ಯ ಮುಂದುವರೆಸಿದ್ದು ಯಾವುದೇ ಸುಳಿವು ಸಿಕ್ಕಿಲ್ಲ ವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ಪೊಲೀಸ್ ತಂಡ ಕೂಡ ಧಾವಿಸಿದ್ದು ಜಂಟಿಯಾಗಿ ಕಾರ್ಯ ಚುರುಕುಗೊಂಡಿದೆ.
ನಾಪತ್ತೆಯಾದ ವ್ಯಕ್ತಿಯ ಕುಟುಂಬಸ್ಥರು ಗುರುವಾರ ಕುರುಗೋಡಿಗೆ ಆಗಮಿಸಿದ್ದು, ಠಾಣೆ ಯಲ್ಲಿ ಪ್ರಕರಣ ದಾಖಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.