ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ
Team Udayavani, Aug 18, 2022, 1:33 PM IST
ವಿಜಯಪುರ: ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಸಾರಥ್ಯದಲ್ಲಿ ರಾಜ್ಯದಲ್ಲಿ ಆಲಮಟ್ಟಿ ಶಾಸ್ತ್ರೀ ಜಲಾಶಯದಲ್ಲಿ ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಲಾಗಿದೆ. ನೆರೆಯ ಮಹಾರಾಷ್ಟ್ರ ಮುಖ್ಯಮಂತ್ರಿಗಳೇ ಶ್ಲಾಘಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಮುಖಂಡರಾದ ಜಿ.ಪಂ. ಮಾಜಿ ಅಧ್ಯಕ್ಷ ಉಮೇಶ ಕೋಳಕೂರ ಸಂತಸ ವ್ಯಕ್ತಪಡಿಸಿದರು.
ಗುರುವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಲಸಂಪನ್ಮೂಲ ಸಚಿವ ಕಾರಜೋಳ ಹಾಗೂ ಇಲಾಖೆಯ ಅಧಿಕಾರಿಗಳು ಮಳೆಗಾಲದಲ್ಲಿ ಜಲಾಶಯಕ್ಕೆ ಹರಿದು ಬರುವ ಬೃಹತ್ ಪ್ರಮಾಣದ ನೀರಿನ ನಿರ್ವಹಣೆ ಮಾಡಿದ್ದರಿಂದ ಕೃಷ್ಣ, ಭೀಮಾ ನದಿಗಳಲ್ಲಿ ಸಂಭವನೀಯ ಪ್ರವಾಹ ದುರಂತ ತಪ್ಪಿಸಲು ಸಾಧ್ಯವಾಗಿದೆ ಎಂದರು.
ಈವರೆಗೆ ಕೃಷ್ಣಾ ನದಿ ನೀರಿನ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯದೊಂದಿಗೆ ತಗಾದೆ ತೆಗೆದಿರುವುದೇ ಹೆಚ್ಚು. ಆದರೆ ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರೇ ಕರ್ನಾಟಕ ರಾಜ್ಯದ ಅಧಿಕಾರಿಗಳನ್ನು ಶ್ಲಾಘಿಸಿರುವುದು ಹೆಮ್ಮೆಯ ಸಂಗತಿ. ಇದಕ್ಕಾಗಿ ಸಚಿವ ಗೋವಿಂದ ಕಾರಜೋಳ ಅವರನ್ನು ಹೇಳಿದರು.
ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುವ ಮಳೆ, ಜಲಾಶಯಗಳ ನೀರಿನ ಒಳ-ಹೊರ ಹರಿವಿನ ಪ್ರಮಾಣ ಸೇರಿದಂತೆ ಕರ್ನಾಟಕ ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇ ಪ್ರವಾಹ ಪರಿಸ್ಥಿತಿ ಸಂಭವಿಸದಂತೆ ಮಾಡಿದ್ದೇ ಶ್ಲಾಘನೆಗೆ ಕಾರಣವಾಗಿದೆ ಎಂದರು.
ಡೋಣಿ ನದಿ ಪ್ರವಾಹ ನಿರ್ವಹಣೆ ವಿಷಯದಲ್ಲಿ ಜಲಸಂಪನ್ಮೂಲ ಹಿಂದಿನ ಸಚಿವರು ನಿರ್ಲಕ್ಷ್ಯ ತೋರಿದ್ದೇ ಕಾರಣ. ಇದೀಗ ಆ ಮಾದರಿ, ಈ ಮಾದರಿ ಅಂತೆಲ್ಲ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಕೋಶಿ ಸೇರಿದಂತೆ ಇತರೆ ಯಾವ ಮಾದರಿಗಿಂತ ಸ್ಥಳೀಯ ರೈತರೇ ಬಹುದೊಡ್ಡ ಅನುಭವಿಗಳಿದ್ದಾರೆ. ಅವರ ಯೋಜನೆಗಳನ್ನೇ ಅನುಷ್ಠಾನಕ್ಕೆ ತಂದರೆ ಸಾಕಿದೆ ಎಂದರು.
ಇದನ್ನೂ ಓದಿ: ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ಈ ವಿಷಯದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಡೋಣಿನದಿ ಹೂಳು ಎತ್ತುವುದು ಸೇರಿದಂತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳ ಜೊತೆ ಮಾಹಿತಿ ಸಂಗ್ರಹಿಸುವ ಕೆಲಸ ನಡೆಸಿದ್ದಾರೆ ಎಂದರು.
ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಮಾತನಾಡಿ, ಈ ಹಿಂದಿನ ಸಚಿವರು 2017 ರಲ್ಲಿ ಆಲಮಟ್ಟಿ ಶಾಸ್ತ್ರೀ ಜಲಾಶಯದಲ್ಲಿ ಅಸಮರ್ಪಕ ನೀರಿನ ನಿರ್ವಹಣೆ ಮಾಡಿದ್ದರ ಪರಿಣಾಮ ಜಲಾಶಯದ ಡೆಡ್ ಸ್ಟೋರೇಜ್ ನೀರಿನ ಬಳಕೆ ಮಾಡುವ ದುಸ್ಥಿತಿ ನಿರ್ಮಾಣ ಆಗಿತ್ತು. ಸಚಿವ ಗೋವಿಂದ ಕಾರಜೋಳ ಅವರ ಸಮರ್ಥ ನೀರಿನ ನಿರ್ವಹಣೆಯೇ ಇಂದು ಅನ್ಯ ರಾಜ್ಯದ ಮುಖ್ಯಮಂತ್ರಿ ಹೊಗಳುವ ಸುಸ್ಥಿತಿ ನಿರ್ಮಾಣವಾಗಿದೆ ಎಂದರು. ಈ ವೇಳೆ ಜಿ.ಪಂ. ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಕನ್ನೂರು, ನವೀನ ಅರಕೇರಿ, ಭೀಮಾಶಂಕರ ಬಿರಾದಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.