ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ

ಬಿಜೆಪಿ ಮನಸ್ಥಿತಿ : ಪ್ರಧಾನಿ ವಿರುದ್ಧ ಕಿಡಿ ಕಾರಿದ ರಾಹುಲ್ ಗಾಂಧಿ

Team Udayavani, Aug 18, 2022, 3:09 PM IST

1-asdsasd

ನವದೆಹಲಿ: ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಕುರಿತು ಬಿಜೆಪಿ ನಾಯಕ ಶಹನವಾಜ್ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

2018ರಲ್ಲಿ ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರು ನೀಡಿದ ದೂರಿನ ಕುರಿತು ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ಸಂಪೂರ್ಣ ನಿರಾಸಕ್ತಿ ಇದೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿ ಆಶಾ ಮೆನನ್‌, ಎಫ್‌ಐಆರ್‌ ದಾಖಲಿಸಲು ನಿರ್ದೇಶಿಸಿರುವ 2018ರ ವಿಚಾರಣಾ ಆದೇಶದಲ್ಲಿ ಯಾವುದೇ ವಿಕೃತಿ ಇಲ್ಲ ಎಂದು ಹೇಳಿ, ಕಾರ್ಯಾಚರಣೆಗೆ ತಡೆ ನೀಡಿದ್ದ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತೆರವು ಮಾಡಿದರು.

“ ಕೂಡಲೇ ಎಫ್‌ಐಆರ್‌ ದಾಖಲಿಸಬೇಕು. ತನಿಖೆಗಳನ್ನು ಪೂರ್ಣಗೊಳಿಸಬೇಕು ಮತ್ತು ಸೆಕ್ಷನ್ 173 ಸಿ ಆರ್ ಪಿಸಿ ಅಡಿಯಲ್ಲಿ ವಿವರವಾದ ವರದಿಯನ್ನು ನೀಡಬೇಕು. ಮೂರು ತಿಂಗಳೊಳಗೆ  ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಬೇಕು,” ಎಂದು ನ್ಯಾಯಾಲಯ ಬುಧವಾರ ತನ್ನ ಆದೇಶದಲ್ಲಿ ತಿಳಿಸಿದೆ.

ಅತ್ಯಾಚಾರದ ಆರೋಪದ ಮೇಲೆ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮೂಲದ ಮಹಿಳೆಯೊಬ್ಬರು ಕೆಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಕಿಡಿ ಕಾರಿದ ರಾಹುಲ್ ಗಾಂಧಿ

ಕ್ರಿಮಿನಲ್‌ಗಳಿಗೆ ಬಿಜೆಪಿಯ ಬೆಂಬಲವು ಮಹಿಳೆಯರ ಬಗ್ಗೆ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂತಹ ರಾಜಕಾರಣ ಮಾಡಿರುವುದು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವ್, ಹತ್ರಾಸ್, ಜಮ್ಮು- ಕಾಶ್ಮೀರದ ಕಥುವಾ ಮತ್ತು ಈಗ ಗುಜರಾತ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಉದಾಹರಣೆಗಳನ್ನು ಅವರು ಉಲ್ಲೇಖಿಸಿ, ಅಲ್ಲಿ ಸರಕಾರವು ಈ ವಾರ 2002 ರ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅತ್ಯಾಚಾರ ಮತ್ತು ಹತ್ಯೆಯ ಅಪರಾಧಿಗಳನ್ನು ಬಿಡುಗಡೆ ಮಾಡಿದೆ. “ಉನ್ನಾವ್ – ಬಿಜೆಪಿ ಶಾಸಕರನ್ನು ಉಳಿಸಲು ಕೆಲಸ ಮಾಡಿದೆ. ಕಥುವಾ – ಅತ್ಯಾಚಾರಿಗಳ ಪರವಾಗಿ ರ‍್ಯಾಲಿ. ಹತ್ರಾಸ್ – ಅತ್ಯಾಚಾರಿಗಳ ಪರವಾಗಿ ಸರಕಾರ. ಗುಜರಾತ್ – ಅತ್ಯಾಚಾರಿಗಳ ಬಿಡುಗಡೆ ಮತ್ತು ಗೌರವ. ಕ್ರಿಮಿನಲ್‌ಗಳಿಗೆ ಬೆಂಬಲ ನೀಡುವುದು ಮಹಿಳೆಯರ ಬಗ್ಗೆ ಬಿಜೆಪಿಯ ಕ್ಷುಲ್ಲಕ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.