ಸಂಗೀತ-ಸಾಹಿತ್ಯ-ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರ ನಿರ್ಮಿಸಿ
ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯಿಂದ ಸ್ತಬ್ಧ ಚಿತ್ರ ಭಾಗವಹಿಸಲಿದೆ.
Team Udayavani, Aug 18, 2022, 4:15 PM IST
ಧಾರವಾಡ: ಮೈಸೂರು ದಸರಾ ಜಂಬೂ ಸವಾರಿಯ ಮೆರವಣಿಗೆಯಲ್ಲಿ ಸಾಗುವ ಸ್ತಬ್ಧ ಚಿತ್ರಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ, ಪರಿಸರ ಹಾಗೂ ಇತರೆ ಪರಂಪರೆಗಳನ್ನು ಬಿಂಬಿಸುವ ಮೂಲಕ ಜನರ ಗಮನ ಸೆಳೆಯುತ್ತವೆ. ಧಾರವಾಡ ಜಿಲ್ಲೆಯ ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ಧ ಚಿತ್ರ ನಿರ್ಮಿಸಬೇಕು ಎಂದು ಜಿಪಂ ಸಿಇಒ ಡಾ|ಸುರೇಶ ಇಟ್ನಾಳ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಮೈಸೂರು ದಸರಾ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಭಾಗವಹಿಸುವ ಮತ್ತು ವಸ್ತು ಪ್ರದರ್ಶನದಲ್ಲಿ ಮಳಿಗೆ ಸ್ಥಾಪಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕೈಗೊಂಡು ಅವರು ಮಾತನಾಡಿದರು.
ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅಕ್ಟೋಬರ್ 5ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ವಿಜಯ ದಶಮಿ ಜಂಬೂ ಸವಾರಿ ಮೆರವಣಿಗೆ ಅ.5ರಂದು ನಡೆಯಲಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯಿಂದ ಸ್ತಬ್ಧ ಚಿತ್ರ ಭಾಗವಹಿಸಲಿದೆ. ಈ ಮೆರವಣಿಗೆಯಲ್ಲಿ ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿ ಬಿಂಬಿಸುವ, ಪರಿಸರ, ಅರಣ್ಯೀಕರಣ, ಅಂತರ್ಜಲ, ಪರಿಸರ ಸ್ನೇಹಿ, ಪ್ರವಾಸೋದ್ಯಮ, ಸಂವಿಧಾನ, ಸಮಾನತೆ ಹಾಗೂ ಕೋಮು ಸಾಮರಸ್ಯ ಬಿಂಬಿಸುವ ಸ್ತಬ್ಧ ಚಿತ್ರಗಳನ್ನು ರೂಪಿಸಿ, ಪ್ರದರ್ಶಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಮಂಡಿಸಿದ ವಿಷಯಗಳ ಆಧಾರದ ಮೇಲೆ ಧಾರವಾಡ ಜಿಲ್ಲೆಯಿಂದ ಸ್ತಬ್ಧಚಿತ್ರ ನಿರ್ಮಿಸಲು ಸಂಗೀತ ದಿಗ್ಗಜರು, ಸಾಹಿತ್ಯ ದಿಗ್ಗಜರು ಮತ್ತು ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ವಿಷಯಗಳನ್ನು ಆಯ್ಕೆ ಮಾಡಲಾಯಿತು. ಈ ವಿಷಯಗಳ ಕುರಿತು ಸ್ತಬ್ಧ ಚಿತ್ರ ಪೂರಕ ಮಾಹಿತಿ, ಮಾದರಿ ರೂಪಿಸಿ, ಮೂರು ದಿನದಲ್ಲಿ ಜಿಪಂ ಕಚೇರಿಗೆ ಸಲ್ಲಿಸುವಂತೆ ಜಿಪಂ ಸಿಇಒ ತಿಳಿಸಿದರು.
ಜಿಪಂ ಯೋಜನಾ ನಿರ್ದೇಶಕ ಬಿ.ಎಸ್. ಮುಗನೂರಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಸ್ತು ಪ್ರದರ್ಶನ ಮಳಿಗೆ ಸ್ಥಾಪನೆ ಹಾಗೂ ಸ್ತಬ್ಧ ಚಿತ್ರ ವಿಷಯಗಳ ಕುರಿತು ಸಭೆಯಲ್ಲಿ ವಿವರಿಸಿದರು.
ಜಿಪಂ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ಬಿ.ಸಿ.ಕರಿಗೌಡರ ಸೇರಿದಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.