ರಾಜ್ಯೋತ್ಸವ ಪ್ರಶಸ್ತಿ: ಜನರಿಂದಲೇ ಸಾಧಕರ ಆಯ್ಕೆ; ಸಚಿವ ವಿ. ಸುನಿಲ್ ಕುಮಾರ್
Team Udayavani, Aug 19, 2022, 6:38 AM IST
ಬೆಂಗಳೂರು: ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣದ ಸಹಯೋಗದಲ್ಲಿ “ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ನಾಟಕ ಪ್ರದರ್ಶನಕ್ಕೆ ಗುರುವಾರ ನಗರದ ನಯನ ರಂಗಮಂದಿರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಪ್ರಶಸ್ತಿಗೆ ಸಂಬಂಧಿಸಿ ಆಯ್ಕೆ ಸಮಿತಿ ರಚಿಸಲಾಗುವುದು. ಆ ಸಮಿತಿಯು ರಾಜ್ಯಾದ್ಯಂತ ಸುತ್ತಾಡಿ ಜನರ ಸಲಹೆಗಳಿಗೆ ಅನುಗುಣವಾಗಿ ಅರ್ಹರನ್ನು ಆಯ್ಕೆ ಮಾಡಲಿದೆ ಎಂದು ಹೇಳಿದರು.
ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ ಎಂದ ಅವರು, ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್ವರೆಗೂ ನಡೆಸುವ ಚಿಂತನೆ ಇದೆ. ಈ ಮೂಲಕ ಕರ್ನಾಟಕದ ಹೋರಾಟದ ಹಾದಿಯನ್ನು ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಮಳೆಗಾಲದ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಸೆಪ್ಟಂಬರ್ನಲ್ಲಿ ಅಧಿವೇಶನ ನಡೆಯಲಿದ್ದು, ಬ್ಯಾಂಕ್ವೆಟ್ ಹಾಲ್ನಲ್ಲಿ ನಾಟಕ ಪ್ರದರ್ಶಿಸಲು ಉದ್ದೇಶಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.