ನ್ಯಾ. ಅಡಿ ಸಮಿತಿಗೆ ತಾತ್ಕಾಲಿಕ ತಡೆ
Team Udayavani, Aug 19, 2022, 7:50 AM IST
ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಗಣಿಸಿ ಮುಂದಿನ ಕ್ರಮ ಜರುಗಿಸಲು ರಚಿಸಲಾಗಿರುವ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಈ ವಿಚಾರವಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತ ಮುಂದಿನ ಆದೇಶದವರೆಗೆ ಪ್ರಕರಣದಲ್ಲಿ ಮುಂದುವರಿಯದಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ತಾತ್ಕಾಲಿಕ ತಡೆ ನೀಡಿ ಇತ್ತೀಚೆಗೆ ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿತು.
ಪಂಚಮಸಾಲಿ ಉಪ ಪಂಗಡವನ್ನು 3ಬಿ ವಿಭಾಗದಿಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ 2021ರ ಜುಲೈ 1ರಂದು ರಚಿಸಿತ್ತು ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.
ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ಸಮಿತಿಯ ಕಾರ್ಯ ನಿರ್ವಹಣೆಗೆ ನಿರ್ಬಂಧ ವಿಧಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.