ಭಾರತದಲ್ಲಿ 24ಗಂಟೆಯಲ್ಲಿ 15,754 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 47 ಸಾವು
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,253ಕ್ಕೆ ತಲುಪಿದೆ
Team Udayavani, Aug 19, 2022, 11:40 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,754 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,43,14,618ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಅನಾರೋಗ್ಯ ಸಮಸ್ಯೆ; ಮಗನಿಗೆ ವಿಷ ಕುಡಿಸಿ ಬಳಿಕ ಆತ್ಮಹತ್ಯೆಗೆ ಶರಣಾದ ದಂಪತಿ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,01,830ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 47 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,253ಕ್ಕೆ ತಲುಪಿದೆ ಎಂದು ಅಂಕಿಅಂಶ ತಿಳಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.58ರಷ್ಟಿದೆ. ಒಂದೇ ದಿನದಲ್ಲಿ 487 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.3.47ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.90ರಷ್ಟಿದೆ.
ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,36,85,535ಕ್ಕೆ ತಲುಪಿದೆ. ಅಲ್ಲದೇ ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 209.27 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.