![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 19, 2022, 12:42 PM IST
ಪವನ್ ಒಡೆಯರ್ ನಿರ್ಮಾಣದ “ಡೊಳ್ಳು’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಅದು “ಮಾಯಾನಗರಿ… ’ ಈ ಹಾಡನ್ನು ಇತ್ತೀಚೆಗೆ ನಟ ಧನಂಜಯ್ ಬಿಡುಗಡೆ ಮಾಡಿದ್ದಾರೆ.
ಹಳ್ಳಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬರುವ ನಾಯಕನ ಕಣ್ಣಲ್ಲಿ ಮಯಾನಗರಿ ಸೊಬಗನ್ನು ತೆರೆದಿಡುವ ಈ ಹಾಡಿಗೆ ಪ್ರದ್ಯುಮ್ನ ನರಹಳ್ಳಿ ಸಾಹಿತ್ಯ ಬರೆದಿದ್ದು, ಆನಂತ್ ಸಂಗೀತವಿದೆ. ಈ ಹಾಡಿಗೆ ನಿರ್ದೇಶಕ ಸಾಗರ್ ಪುರಾಣಿಕ್ ಧ್ವನಿಯಾಗಿದ್ದಾರೆ. ಈ ಮೂಲಕ ಸಾಗರ್ ಗಾಯಕರಾಗಿಯೂ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ.
ಜನಪದ ಕಲೆ ಡೊಳ್ಳಿನ ಸುತ್ತ ಸಾಗುವ ಚಿತ್ರಕ್ಕೆ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಒಡೆಯರ್ ಮೂವೀಸ್ ಬ್ಯಾನರ್‌ನಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸಿದ್ದು, ನಿಧಿ ಹೆಗ್ಡೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾವಿದರು ನಟಿಸಿದ್ದಾರೆ. ಶ್ರೀನಿಧಿ ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಅನಂತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಚಿತ್ರಕ್ಕಿದೆ. ಚಿತ್ರ ಆ.26ರಂದು ತೆರೆ ಕಾಣುತ್ತಿದೆ. ಇನ್ನು, ಈ ಚಿತ್ರ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಹಲವು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನದಲ್ಲಿಕೊಂಡು ಮೆಚ್ಚುಗೆ ಪಡೆದಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.