ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!
ಇದೊಂದು ಎಮೋಶನಲ್ ಜರ್ನಿ. ಎರಡು ಕಾಲು ಘಂಟೆ ನಗು, ಅಳು, ಕಾಮಿಡಿ ಎಲ್ಲವೂ ಇದೆ
Team Udayavani, Aug 19, 2022, 1:41 PM IST
ಸಿನಿಮಾದ ಟೈಟಲ್ ವಿಭಿನ್ನವಾಗಿದ್ದರೆ ಪ್ರೇಕ್ಷಕರ ಗಮನವನ್ನು ಬೇಗನೇ ಸೆಳೆಯಬಹುದು ಎಂಬ ನಂಬಿಕೆ ಸಿನಿಮಾ ಮಂದಿಯಲ್ಲಿದೆ. ಅದೇ ಕಾರಣದಿಂದ ವಿಭಿನ್ನ ಟೈಟಲ್ ಗಳ ಹುಡುಕಾಟದಲ್ಲಿ ರುತ್ತವೆ ಚಿತ್ರ ತಂಡಗಳು.
ಇದೇ ರೀತಿ ಒಂದು ಹೊಸ ಬಗೆಯ ಶೀರ್ಷಿಕೆಯೊಂದಿಗೆ ಸಿನಿಮಾ ಕನಸು ಕಂಡ ತಂಡ “ಕಂಬ್ಳಿಹುಳ’. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರದ ಮೊದಲ ಹಾಡು ಇತ್ತೀ ಚೆಗೆ ಬಿಡುಗಡೆಯಾಗಿದೆ. “ಜಾರಿ ಬಿದ್ದರೂ ಯಾಕೀ ನಗು…’ಎಂಬ ಹಾಡು ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್ -ಸಂಗೀತ ರವೀಂದ್ರನಾಥ್ ಧ್ವನಿಯಾಗಿದ್ದು, ಶಿವ ಪ್ರಸಾದ್ ಸಂಗೀತದ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಜೋಡಿ ನಟಿಸಿದೆ.
ಈ ಚಿತ್ರವನ್ನು ನವನ್ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಶ್ರೀನಿವಾಸ್, “ಕಿರುಚಿತ್ರದಿಂದ ಆರಂಭವಾದ ನನ್ನ ಜರ್ನಿ ಈಗ “ಕಂಬ್ಳಿಹುಳ’ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಗುರುತಿಸಿಕೊಳ್ಳುವ ಹಂತಕ್ಕೆ ಬಂದಿದೆ. ಮಲೆನಾಡಿನ ಹಿನ್ನೆಲೆಯಲ್ಲಿ ನಡೆಯುವ ಚಿತ್ರವಿದು. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ಶೂಟಿಂಗ್ ಮಾಡಿದ್ದೇವೆ. ಇದೊಂದು ಎಮೋಶನಲ್ ಜರ್ನಿ. ಎರಡು ಕಾಲು ಘಂಟೆ ನಗು,
ಅಳು, ಕಾಮಿಡಿ ಎಲ್ಲವೂ ಇದೆ’ ಎಂದರು.
ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್‌ನಡಿ ತಯಾರಾಗಿರುವ “ಕಂಬ್ಳಿಹುಳ ನೈಜ ಘಟನೆಯಾಧಾರಿತ ಸಿನಿಮಾವಾಗಿದೆ. ಈ ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಾಣಾಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿ.ಕೆ ಸಂಕಲನ ಸಿನಿಮಾಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bhairathi Ranagal; ಶಿವಣ್ಣ ಡ್ರೀಮ್ ಪ್ರಾಜೆಕ್ಟ್ ಭೈರತಿ ಮೈಲುಗಲ್!
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.