“ಹರ್ ಘರ್ ಜಲ್’ ಗೋವಾ ಮೊದಲಿಗ : ದೇಶದಲ್ಲಿಯೇ ವಿಶಿಷ್ಟ ಸ್ಥಾನಪಡೆದ ಬೀಚ್ ರಾಜ್ಯ
Team Udayavani, Aug 20, 2022, 6:25 AM IST
ಪಣಜಿ: ಪ್ರತಿ ಮನೆಗೆ ಪೈಪ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಗೋವಾ ಭಾರೀ ಸಾಧನೆ ಮಾಡಿದೆ.
“ಹರ್ ಘರ್ ಜಲ್’ ಯೋಜನೆಯ ಅನ್ವಯ ಗೋವಾ, ಕೇಂದ್ರಾಡಳಿತ ಪ್ರದೇಶಗಳಾಗಿರುವ ದಾದ್ರಾ ಮತ್ತು ನಗರ ಹವೇಲಿ ಮತ್ತು ದಾಮನ್, ಡಿಯು ದೇಶದಲ್ಲಿಯೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಅನ್ವಯ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿವೆ.
ಗೋವಾದಲ್ಲಿರುವ 2.63 ಲಕ್ಷ, ದಾದ್ರಾ ಮತ್ತು ನಗರ ಹವೇಲಿ, ದಾಮನ್ ಮತ್ತು ಡಿಯುನಲ್ಲಿರುವ 85,156 ಮನೆಗಳಿಗೆ ಪೈಪ್ ಮೂಲಕ ಶುದ್ಧ ಕುಡಿವ ನೀರು ಪೂರೈಕೆ ಮಾಡಲಾಗಿದೆ. ಅದಕ್ಕೆ ಪೂರಕವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೂರು ವರ್ಷಗಳ ಅವಧಿಯಲ್ಲಿ ದೇಶದ ಏಳು ಕೋಟಿ ಗ್ರಾಮೀಣ ಮನೆಗಳಿಗೆ ಶುದ್ಧ ಕುಡಿವ ನೀರು ಪೂರೈಕೆ ಮಾಡಲಾಗಿದೆ. ಇದುವರೆಗೆ ದೇಶಾದ್ಯಂತ ಒಟ್ಟು ಹತ್ತು ಕೋಟಿ ಮನೆಗಳಿಗೆ ಪೈಪ್ ಮೂಲಕ ಶುದ್ಧ ಕುಡಿವ ನೀರು ಪೂರೈಕೆ ಮಾಡಲಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ಪ್ರಧಾನಿ “ದೇಶದ ಹಾಲಿ ಮತ್ತು ಮುಂದಿನ ದಿನಗಳ ಬಗ್ಗೆ ಕಾಳಜಿ ವಹಿಸದೇ ಇರುವವರು ಕೇವಲ ನೀರಿನ ಉಳಿತಾಯದ ಬಗ್ಗೆ ಮಾತನಾಡುತ್ತಿದ್ದರು. ಆದರೆ, ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕ್ರಮವನ್ನೂ ಕೈಗೊಳ್ಳಲಿಲ್ಲ’ ಎಂದೂ ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.