ಶ್ರೀಕೃಷ್ಣಮಠ: ಕೃಷ್ಣಾಷ್ಟಮಿ ಉತ್ಸವ, ವಿಶೇಷ ಪೂಜೆ, ಅರ್ಘ್ಯ ಪ್ರದಾನ

Team Udayavani, Aug 20, 2022, 7:00 AM IST

ಶ್ರೀಕೃಷ್ಣಮಠ: ಕೃಷ್ಣಾಷ್ಟಮಿ ಉತ್ಸವ, ವಿಶೇಷ ಪೂಜೆ, ಅರ್ಘ್ಯ ಪ್ರದಾನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾ ಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆದವು. ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.

ಏಕಾದಶಿಯಂತೆ ನಿರ್ಜಲ ಉಪವಾಸದಿಂದಿದ್ದ ಕಾರಣ ಪರ್ಯಾಯ ಶ್ರೀಪಾದರು ಬೆಳಗ್ಗೆ ಮತ್ತು ರಾತ್ರಿ ಎರಡೂ ಹೊತ್ತು ಮಹಾಪೂಜೆ ನಡೆಸಿದರು. ಲಕ್ಷತುಳಸಿ ಅರ್ಚನೆಯನ್ನು ನಡೆಸಿದರು. ಕಾಣಿಯೂರು ಮಠದ ಶ್ರೀವಿ ದ್ಯಾ ವಲ್ಲಭ ತೀರ್ಥ ಶ್ರೀಪಾದರು ಬೆಳಗ್ಗೆ ಮತ್ತು ರಾತ್ರಿ ಪೂಜೆಗಳಲ್ಲಿ ಪಾಲ್ಗೊಂಡರು. ಶ್ರೀಪಾದರು ಬೆಳಗ್ಗೆ ಮಹಾಪೂಜೆ ಬಳಿಕ ರಾತ್ರಿ ನೈವೇದ್ಯಕ್ಕಾಗಿ ಉಂಡೆಗಳನ್ನು ಕಟ್ಟಿ ಮುಹೂರ್ತ ಮಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಯಾಕ್ಸೋಫೋನ್, ನಾಗಸ್ವರ ವಾದನ, ನೃತ್ಯೋತ್ಸವ, ಹುಲಿವೇಷ ಕುಣಿತ ನಡೆಯಿತು. ರಾತ್ರಿ ನೈವೇದ್ಯಗಳನ್ನು ಸಮರ್ಪಿಸಿ  ಮಹಾಪೂಜೆ ನಡೆಸಿದ ಸ್ವಾಮೀಜಿಯವರು ಬಳಿಕ ಚಂದ್ರೋದಯದ ವೇಳೆ 12.21 ಗಂಟೆಗೆ ಕೃಷ್ಣನಿಗೆ ಅರ್ಘ್ಯಪ್ರದಾನ ಮಾಡಿದರು. ಬಳಿಕ ಭಕ್ತರಿಗೆ ಅರ್ಘ್ಯ ಬಿಡುವ ಅವಕಾಶ ಕಲ್ಪಿಸಲಾಗಿತ್ತು. ಕೆಲವೆಡೆ ಗುರುವಾರ ಅಷ್ಟಮಿಯಂದು ಕೃಷ್ಣಾರ್ಘ್ಯಪ್ರದಾನವಾಗಿ ಶುಕ್ರವಾರ ಮೊಸರುಕುಡಿಕೆ ಉತ್ಸವ ನಡೆಯಿತು.

ಆಕರ್ಷಕ ಪುಷ್ಪಾಲಂಕಾರ
ಶ್ರೀಕೃಷ್ಣಮಠದ ಒಳ ಹಾಗೂ ಹೊರಭಾಗ, ಮಧ್ವಮಂಟಪ, ಸುಬ್ರಹ್ಮಣ್ಯ ಗುಡಿ, ಮುಖ್ಯಪ್ರಾಣ ದೇವರು, ಕನಕಗೋಪುರಗಳಿಗೆ ಸೇವಂತಿಗೆ, ಗೊಂಡೆ, ತುಳಸಿ ಮೂಲಕ ಅಲಂಕಾರ ಮಾಡಲಾಗಿದೆ. ಯುವರಾಜ್‌ ಮಸ್ಕತ್‌ ಅವರು ಇದಕ್ಕೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿದ್ದಾರೆ.

ಕೃಷ್ಣನೂರಿನಲ್ಲಿ ನಂದ ಗೋಕುಲ
ಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ನಂದ ಗೋಕುಲವೇ ಸೃಷ್ಟಿಯಾಗಿತ್ತು. ಕೃಷ್ಣಮಠದಲ್ಲಿ ಆಯೋಜಿಸಿದ್ದ ಕೃಷ್ಣ ಸ್ಪರ್ಧೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕೃಷ್ಣ ವೇಷಧಾರಿ ಪುಟಾಣಿ ಮಕ್ಕಳು ಗಮನ ಸೆಳೆದರು. ಅಲ್ಲದೆ ರಥಬೀದಿ, ನಗರದ ಹಲವೆಡೆ ಕೃಷ್ಣ ವೇಷ, ಪೇಪರ್‌ ವೇಷ, ರಕ್ಕಸ ವೇಷ, ಹುಲಿವೇಷಧಾರಿಗಳ ತಂಡ ಕಂಡುಬಂತು.

ಬಿಗಿ ಪೊಲೀಸ್‌ ಬಂದೋಬಸ್ತ್: 123 ಕಡೆ ಸಿಸಿ ಕೆಮರಾ
ಶ್ರೀಕೃಷ್ಣ ಮಠದಲ್ಲಿ ಶನಿ ವಾರ ವಿಟ್ಲಪಿಂಡಿ ಮಹೋತ್ಸವ ನಡೆಯಲಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಜಿಲ್ಲಾ ಎಸ್‌ಪಿ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈಎಸ್‌ಪಿ, 4 ಮಂದಿ ಇನ್‌ಸ್ಪೆಕ್ಟರ್‌ಗಳು, 12 ಮಂದಿ ಎಸ್‌ಐ, 23 ಎಎಸ್‌ಐ ಸಹಿತ ಒಟ್ಟು 230 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸಶಸ್ತ್ರ ಭದ್ರತೆ
ಮಠದ 8 ಗೇಟ್‌ಗಳಲ್ಲಿ ಸಶಸ್ತ್ರ ಭದ್ರತೆ ಮಾಡಲಾಗಿದೆ. ಶ್ವಾನದಳ, ಬಾಂಬ್‌ ಸ್ಕ್ವಾಡ್‌, ಕೆಎಸ್‌ಆರ್‌ಪಿ, ಡಿಎಆರ್‌ ಅನ್ನು ನಿಯೋಜಿಸಲಾಗಿದೆ. ಶ್ವಾನದಳದವರು ಪರಿಶೀಲನೆ ನಡೆಸು ತ್ತಿದ್ದಾರೆ. ಮಠದ ಸುತ್ತ 123 ಕಡೆ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಭಕ್ತರ ಸಂಖ್ಯೆ ಗಮನಿಸಿ ಡ್ರೋನ್‌ ಬಳಸುವ ಬಗ್ಗೆ ಇಲಾಖೆ ನಿರ್ಧರಿಸಲಿದೆ.

ನೈಸರ್ಗಿಕ ವಿಗ್ರಹಕ್ಕೆ ಪೂಜೆ
ವಿಟ್ಲಪಿಂಡಿ ಉತ್ಸವದಲ್ಲಿ ಯಾವುದೇ ಬಣ್ಣವಿಲ್ಲದ ಆವೆಮಣ್ಣಿನ ಕೃಷ್ಣ ವಿಗ್ರಹ ಪೂಜೆಗೊಳ್ಳುತ್ತಿದೆ. ಸುಮಾರು 9 ಇಂಚು ಎತ್ತರದ ಮೂರ್ತಿಯನ್ನು ಚಿಟಾ³ಡಿ ಸೋಮನಾಥರು ತಯಾರಿಸಿದ್ದಾರೆ. ರಾಸಾಯನಿಕರಹಿತ ಕಪ್ಪು ಬಣ್ಣವನ್ನು ಕೊಡಲಾಗಿದೆ. ಈಗ ಚಾತುರ್ಮಾಸ್ಯ ವ್ರತದ ಕಾಲವಾದ ಕಾರಣ ಉತ್ಸವಗಳು ನಡೆಯು ವುದಿಲ್ಲ, ಹೀಗಾಗಿ ಉತ್ಸವಮೂರ್ತಿಯನ್ನು ಗರ್ಭ ಗುಡಿಯಿಂದ ಹೊರಗೆ ತರುವುದಿಲ್ಲ. ಶನಿ ವಾರ ಪೂಜೆ ಸಲ್ಲಿಸಿ ಉತ್ಸವದ ಬಳಿಕ ಮೃಣ್ಮಯ ಮೂರ್ತಿಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸಲಾಗುತ್ತದೆ. ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವಸ್ಥಾನದ ಉತ್ಸವ  ಮೂರ್ತಿಗಳಿಗೂ ಉತ್ಸವದಲ್ಲಿ ಪೂಜೆ ನಡೆಯ ಲಿದೆ.

ಇಂದು ವಿಟ್ಲಪಿಂಡಿ ಉತ್ಸವ
ಶ್ರೀಕೃಷ್ಣಮಠದಲ್ಲಿ ಶನಿವಾರ ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಅಪರಾಹ್ನ 3ಕ್ಕೆ ಉತ್ಸವ ಆರಂಭವಾಗಿ ಸುಮಾರು 5.30ರ ವೇಳೆ ಮಧ್ವ ಸರೋವರದಲ್ಲಿ ತೀರ್ಥಸ್ನಾನ ಮಾಡುವ ಮೂಲಕ ಸಂಪನ್ನಗೊಳ್ಳಲಿದೆ. ಮೆರವಣಿಗೆ, ಸಾಂಸ್ಕೃತಿಕ, ಜಾನಪದ ವೇಷಧಾರಿಗಳ ತಂಡಗಳು ಗಮನ ಸೆಳೆಯಲಿವೆ. ಸಾವಿರಾರು ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.