ಗ್ರಾಮ ವಾಸ್ತವ್ಯ ಹೊಸ ಹೊಸ ಅನುಭವ ನೀಡುವ ಪಾಠಶಾಲೆ: ಆರ್.‌ಅಶೋಕ್

ಲಂಬಾಣಿ ತಾಂಡಾ- ಹಟ್ಟಿ ಕಂದಾಯ ಗ್ರಾಮವಾಗಿ 30 ಸಾವಿರ ಜನರಿಗೆ ಏಕಕಾಲಕ್ಕೆ ಹಕ್ಕುಪತ್ರ ವಿತರಣೆ

Team Udayavani, Aug 20, 2022, 6:02 PM IST

1-addasd

ಕಲಬುರಗಿ: ಇಲ್ಲಿಯವರೆಗೆ ಹತ್ತಕ್ಕೂ ಹೆಚ್ಚು ಗ್ರಾಮ ವಾಸ್ತವ್ಯ ಮಾಡಿದ್ದು, ಒಂದೊಂದು ಗ್ರಾಮ ವಾಸ್ತವ್ಯ ಹೊಸ- ಹೊಸ ಅನುಭವ ನೀಡಿದ್ದು, ಒಂದು ಪಾಠಶಾಲೆಯಾಗಿ ಪರಿಣಮಿಸಿದೆ ಎಂದು ಕಂದಾಯ ಸಚಿವ ಆರ್.‌ಅಶೋಕ್ ಹೇಳಿದರು.

ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಹಾಗೂ 28900 ವಿವಿಧ ಪಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳ ಪ್ರಮಾಣ ಪತ್ರಗಳ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.‌

ಪ್ರತಿಯೊಂದು ಗ್ರಾಮ ವಾಸ್ತವ್ಯ ಹೊಸ ಅನುಭವ ನೀಡಿದ್ದು, ಕಂದಾಯ ಇಲಾಖೆ ಸೇವಾ ಕಾರ್ಯ ಜನರ ಮನೆ ಬಾಗಿಲಿಗೆ ಮುಟ್ಟಿಸಲು ಮತ್ತಷ್ಟು ಸ್ಫೂರ್ತಿ ನೀಡುತ್ತಿದೆ.‌ ಗ್ರಾಮ ವಾಸ್ತವ್ಯ ಮೂಲಕ ವಿವಿಧ ಮಾಸಾಶನ ಫಲಾನುಭವಿಗಳನ್ನು ಗುರುತಿಸಿದ ಪರಿಣಾಮ ಇಂದು 10 ಸಾವಿರ ಕೋ.ರೂ ಅವರ ಖಾತೆಗಳಿಗೆ ಜಮಾ ಆಗುತ್ತಿದೆ ಎಂದರು.

453 ತಾಂಡಾಗಳು ಕಂದಾಯ ಗ್ರಾಮಗಳಾಗಿ ಘೋಷಣೆ

ಮುಂದಿನ ಎರಡು ತಿಂಗಳಲ್ಲಿ ಜಿಲ್ಲೆಯ 453 ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿ ಹಕ್ಕುಪತ್ರ ವಿತರಿಸಲಾಗುವುದು ಎಂದು ಸಚಿವ ಆರ್. ಅಶೋಕ್ ಘೋಷಿಸಿದರು.

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಪೈಲಟ್ ಯೋಜನೆಯಾಗಿ ಕಲಬುರಗಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗುವುದು ಎಂದರು.

ಕೆಲವೇ ದಿನಗಳಲ್ಲಿ ಕಲಬುರಗಿಗೆ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಬಂದು ತಾಂಡಾದ 30 ಸಾವಿರ ಜನರಿಗೆ ಏಕ ಕಾಲಕ್ಕೆ ಭೂಮಿಯ ಹಕ್ಕುಪತ್ರಗಳನ್ನು ಕೊಡಿಸಲಾಗುವುದು. ಇದು ಒಂದು ಗಿನ್ನೆಸ್ ದಾಖಲೆಯಾಗಲಿದೆ ಎಂದು ಸಚಿವರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾದ ಕೆಲ ಹೊತ್ತಿನಲ್ಲಿ ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರು ನನಗೆ ಕರೆ ಮಾಡಿ ತಮ್ಮ ಎರಡು ಘೋಷಣೆಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ ಶಿಪ್ ನೀಡಲಾಗುತ್ತಿದ್ದು, ಅದನ್ನು ಕುಂಬಾರರು, ಕಮ್ಮಾರರು, ಬಡಿಗತನ ವೃತ್ತಿ ಮಾಡುವವರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂಬುದನ್ನು ತಿಳಿಸಲು ಹೇಳಿದ್ದಾರೆ. ಅಲ್ಲದೇ, ಈ ವೃತ್ತಿ ಮುಂದುವರೆಸಲು ₹ 50 ಸಾವಿರ ಸಾಲ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಪ್ರಮುಖವಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಮಾಸಿಕವಾಗಿ ದೊರೆಯುತ್ತಿದ್ದ ₹ 3 ಸಾವಿರ ಆರ್ಥಿಕ ನೆರವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ. ಅವರಿಗೆ ಸರ್ಕಾರದ ವತಿಯಿಂದ ನಿವೇಶನ, ಮನೆ ಕಟ್ಟಿಕೊಡುವುದರ ಜೊತೆಗೆ  5 ಲಕ್ಷ ರೂ.ಆರ್ಥಿಕ ‌ನೆರವನ್ನೂ ನೀಡಲಾಗುವುದು ಎಂದು ಸಚಿವ ಅಶೋಕ ತಿಳಿಸಿದರು.

ಹಲೋ ಕಂದಾಯ ಸಚಿವರೇ ಸಹಾಯವಾಣಿಗೆ ಕರೆ ಮಾಡಿದವರಿಗೆ ಮುಂದಿನ 72 ಗಂಟೆಗಳಲ್ಲಿ ಪಿಂಚಣಿ ಸೌಲಭ್ಯ ಒದಗಿಸಲಾಗಿದೆ. ಅಲ್ಲದೇ, ರೈತರ ಮನೆ ಬಾಗಿಲಿಗೇ ಅವರ ಜಮೀನಿನ ಪಹಣಿ, ಸರ್ವೆ ದಾಖಲೆಗಳನ್ನು ಕಳಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ಯಾವ ಕಂದಾಯ ಸಚಿವರೂ ಮಾಡದ ಕೆಲಸವನ್ನು ನಾನು ಮಾಡಿರುವ ಬಗ್ಗೆ ತೃಪ್ತಿ ‌ಇದೆ. ಮೊದಲೆಲ್ಲ ಸರ್ಕಾರಿ ಸೌಲಭ್ಯ ಪಡೆಯಲು ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ ಅಲೆಯಬೇಕಿತ್ತು. ಆದರೆ, ಜಿಲ್ಲಾಧಿಕಾರಿಗಳ ಕಡೆ ಹಳ್ಳಿಯ ಕಡೆ ಕಾರ್ಯಕ್ರಮ ಆರಂಭವಾದ ಬಳಿಕ ಅಧಿಕಾರಿಗಳು ಗ್ರಾಮಗಳಿಗೇ ಹೋಗುತ್ತಿದ್ದಾರೆ. ಇದರಿಂದ ಜನರ ಅಲೆದಾಟ ತಪ್ಪಿದಂತಾಗಿದೆ. ಹಿಂದಿನ ಸರ್ಕಾರಗಳು ಬೆಳೆ ನಷ್ಟವಾಗಿದ್ದಕ್ಕೆ ಪರಿಹಾರವನ್ನು ಎರಡು ವರ್ಷಗಳ ಪಡೆಯುವ ಸ್ಥಿತಿ ಇತ್ತು. ಇದೀಗ ಪರಿಸ್ಥಿತಿ ಸುಧಾರಿಸಿದ್ದು, ಬೆಳೆ ನಷ್ಟದ ವರದಿ ಬಂದ 30 ದಿನಗಳಲ್ಲೇ ಹಣ ರೈತರ ಖಾತೆಗೆ ಜಮಾ ಆಗುತ್ತಿದೆ ಎಂದು ವಿವರಿಸಿದರು.

ಬೆಳೆನಷ್ಟಕ್ಕಾಗಿ ರಾಜ್ಯದ 18.02 ಲಕ್ಷ ರೈತರಿಗೆ ಕೇಂದ್ರದಿಂದ 1252 ಕೋಟಿ ರೂ. ಹಾಗೂ ರಾಜ್ಯದಿಂದ 1135 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಇಷ್ಟೊಂದು ಹಣವನ್ನು ಹಿಂದಿನ ಯಾವ ಸರ್ಕಾರಗಳೂ ಬಿಡುಗಡೆ ಮಾಡಿರಲಿಲ್ಲ. ಆದರೂ, ನಮ್ಕ ಸರ್ಕಾರ ಸತ್ತಿದೆ ಎಂದು ವಿರೋದ ಪಕ್ಷಗಳವರು ಟೀಕಿಸುತ್ತಿದ್ದಾರೆ. ನಮ್ಮ ಡಬಲ್ ಎಂಜಿನ್ ಸರ್ಕಾರ ಜೀವಂತ ಇದ್ದುದಕ್ಕೇ ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದರು.

ನಿವೇಶನ, ಮನೆ, ಜಮೀನು ಖರೀದಿ ಶುಲ್ಕದಲ್ಲಿ ಕೋವಿಡ್ ಪ್ರಯುಕ್ತ ಶೇ 10ರಷ್ಟು ರಿಯಾಯಿತಿ ನೀಡುವ ಬಗ್ಗೆ ಶೀಘ್ರ ಆದೇಶ ಹೊರಡಿಸಲಿದ್ದೇನೆ. ಈ ಬಗ್ಗೆ ಹಣಕಾಸು ಇಲಾಖೆಗೆ ಮನವರಿಕೆ ಮಾಡಿಕೊಡಲಿದ್ದೇನೆ ಎಂದು ತಿಳಿಸಿದರು.

ಮಾಜಿ ಸಂಸದರೂ ಆಗಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಸಂಸದ ಡಾ. ಉಮೇಶ ಜಾಧವ್ , ಶಾಸಕ ಬಸವರಾಜ ಮತ್ತಿಮಡು, ಪ್ರಾದೇಶಿಕ ಆಯುಕ್ತ ಡಾ. ಎನ್. ವಿ. ಪ್ರಸಾದ, ಡಿಸಿ ಯಶವಂತ ಗುರುಕರ್, ಎಡಿಸಿ ಭೀಮಾಶಂಕರ ತೆಗ್ಹೆಳ್ಳಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.