ರಂಭಾಪುರಿ ಶ್ರೀ-ಸಿದ್ದು ಚರ್ಚೆ ಬಹಿರಂಗಪಡಿಸಲಾಗದು: ಎಚ್.ಆಂಜನೇಯ
Team Udayavani, Aug 21, 2022, 9:49 PM IST
ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಂಭಾಪುರಿ ಶ್ರೀಗಳ ನಡುವೆ ನಡೆದ ಚರ್ಚೆಯ ವಿವರಗಳನ್ನು ಬಹಿರಂಗಪಡಿಸಲಾಗದು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ನಮ್ಮ ಸರ್ಕಾರ ಅ ಧಿಕಾರದಲ್ಲಿದ್ದಾಗ ನಡೆದ ವಿದ್ಯಮಾನಗಳನ್ನು ಸಿದ್ದರಾಮಯ್ಯ ಅವರು ಶ್ರೀಗಳಿಗೆ ವಿವರಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಈಗ ಮುಗಿದ ಆಧ್ಯಾಯ. ಪ್ರತ್ಯೇಕ ಧರ್ಮದ ವಿಷಯಕ್ಕೆ ಸಂಬಂ ಧಿಸಿದಂತೆ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ರಂಭಾಪುರಿ ಶ್ರೀಗಳ ಭೇಟಿ ವೇಳೆ ಏನೆಲ್ಲ ಆಗಿತ್ತು ಎಂಬುದನ್ನು ಈಗಾಗಲೇ ಹೇಳಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಈಗ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೀರಶೈವ ಸಮ್ಮೇಳನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಂಕರಪ್ಪ ಪ್ರತ್ಯೇಕ ಧರ್ಮಕ್ಕಾಗಿ ಅರ್ಜಿ ಕೊಟ್ಟಿದ್ದರೇ ಹೊರತು ಸರ್ಕಾರ ಅರ್ಜಿ ಆಹ್ವಾನಿಸಿರಲಿಲ್ಲ.
ಆ ಸಂದರ್ಭದಲ್ಲಿ ಪಂಚಪೀಠಗಳ ಮಠಾಧೀಶರು ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮುರುಘಾ ಶರಣರು, ಲಿಂಗೈಕ್ಯರಾದ ಮಾತೆ ಮಹಾದೇವಿ, ಇಳಕಲ್ ಶ್ರೀಗಳು, ತೋಂಟದಾರ್ಯ ಶ್ರೀಗಳು ಹಾಗೂ ಪಂಚ ಪೀಠಗಳ ಮಠಾಧಿಧೀಶರನ್ನು ಹೊರತುಪಡಿಸಿ ಇನ್ನುಳಿದ ಹಲವು ಮಠಾಧಿಧೀಶರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ವರದಿ ಪಡೆದಿತ್ತು. ಧರ್ಮವನ್ನು ಪ್ರತ್ಯೇಕಗೊಳಿಸಿ ಲಿಂಗಾಯತರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸವಲತ್ತುಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೇನೂ ಬಾಧಕವಾಗಿಲ್ಲ. ಈ ವಿಚಾರದಲ್ಲಿ ತಪ್ಪಾಗಿದೆ ಎನ್ನುವುದು ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಅಭಿಪ್ರಾಯ. ಆಗ ಅವರು ಕೆಪಿಸಿಸಿ ಅಧ್ಯಕ್ಷರಾಗಿರಲಿಲ್ಲ. ಈ ಹೇಳಿಕೆ ನೀಡಿ ಎರಡು ವರ್ಷಗಳಾಗಿದೆ ಎಂದರು.
ಆ.26ಕ್ಕೆ ಪ್ರತಿ ಜಿಲ್ಲೆಯಿಂದ ಕೊಡಗಿಗೆ:
ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಕೊಡಗು ನಮ್ಮದು ಎಂದು ತೋರಿಸಲು ಪ್ರತಿ ಜಿಲ್ಲೆಯಿಂದಲೂ 1-2 ಸಾವಿರ ಜನ ಕೊಡಗಿಗೆ ತೆರಳುತ್ತೇವೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಬಿಜೆಪಿ ಹಸಿ ಸುಳ್ಳು ಹೇಳುತ್ತಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ಸಿನವನೆಂದು ಹೇಳಿದರೆ ಶೇ.40 ಲಂಚದಲ್ಲಿ ನಿನಗೂ ಪಾಲು ಕೊಡುತ್ತೇವೆ ಎಂದು ಆಮಿಷವೊಡ್ಡಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.