ಕರಾವಳಿಯಲ್ಲಿ ಮಳೆ ಮತ್ತೆ ಚುರುಕು ; 3 ದಿನ ಎಲ್ಲೋ ಅಲರ್ಟ್‌


Team Udayavani, Aug 22, 2022, 8:58 AM IST

ಕರಾವಳಿ: ಮಳೆ ಮತ್ತೆ ಚುರುಕು; 3 ದಿನ ಎಲ್ಲೋ ಅಲರ್ಟ್‌

ಮಂಗಳೂರು/ಉಡುಪಿ : ಹಲವು ದಿನಗಳ ವಿರಾಮದ ಬಳಿಕ ಕರಾವಳಿಯ ಹೆಚ್ಚಿನ ಕಡೆಗಳಲ್ಲಿ ಶನಿವಾರ ರಾತ್ರಿಯಿಂದ ಮತ್ತೆ ಮಳೆ ಚುರುಕುಗೊಂಡಿದೆ.

ಕರಾವಳಿಯಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ದ.ಕ. ಜಿಲ್ಲೆಯ ವಿವಿಧೆಡೆ ಬೆಳಗ್ಗೆ ದಟ್ಟ ಮೋಡ ಆವರಿಸಿ ಉತ್ತಮ ಮಳೆಯ ಮುನ್ಸೂಚನೆ ನೀಡಿತು. ಬಳಿಕ ಮೋಡಗಳು ದುರ್ಬಲವಾಗಿ ಆಗಾಗ್ಗೆ ಸಾಧಾರಣ ಮಳೆಯಾಗಿದೆ. ಮಂಗಳೂರು, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಹೆಚ್ಚಿನ ಕಡೆ ಉತ್ತಮ ಮಳೆ ಸುರಿದಿದೆ.

ಉಡುಪಿ: ಬಿಟ್ಟು ಬಿಟ್ಟು ಮಳೆ
ಉಡುಪಿ: ಜಿಲ್ಲೆಯಲ್ಲಿ ಶನಿವಾರ ರಾತ್ರಿ, ರವಿವಾರ ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದೆ. ಉಡುಪಿ ನಗರ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಪೂರ್ತಿ ಉತ್ತಮ ಮಳೆಯಾಗಿದೆ. ಕುಂದಾಪುರ, ಕಾರ್ಕಳ ತಾಲೂಕಿನ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದೆ.

ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಬಿಸಿಲು, ಮೋಡ ಕವಿದ ವಾತಾವರಣ ನಡುವೆ ಆಗಾಗ್ಗೆ ಧಾರಕಾರ ಮಳೆ ಸುರಿದಿದೆ. ಸಂಜೆ ಬಳಿಕ ನಗರದ ಸುತ್ತಮುತ್ತ ಕೆಲಕಾಲ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.

ಮಳೆ ಮತ್ತೆ ಚುರುಕು ಆಗಿದ್ದರಿಂದ ಮುಖ್ಯವಾಗಿ ಭತ್ತ ಕೃಷಿಕರ ಮೊಗದಲ್ಲಿ ಹರ್ಷ ಕಾಣಿಸಿದೆ. ಕೆಲವು ದಿನಗಳ ಬಿಸಿಲಿನಿಂದಾಗಿ ಗದ್ದೆಗಳಲ್ಲಿ ನೀರು ಕಡಿಮೆಯಾಗಿದ್ದು, ಇನ್ನೇನು ಒಣಗುವ ಹಂತಕ್ಕೆ ಹೋಗುವಷ್ಟರಲ್ಲಿ ಮತ್ತೆ ಮಳೆ ಸುರಿದಿದೆ.

ಮೂರು ದಿನ ಎಲ್ಲೋ ಅಲರ್ಟ್‌
ಮುಂದಿನ ಮೂರ್‍ನಾಲ್ಕು ದಿನ ಕರಾವಳಿಯಲ್ಲಿ ಮಳೆ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆಗಸ್ಟ್‌ 22, 24 ಮತ್ತು 25ಕ್ಕೆ ಅನ್ವಯ ವಾಗುವಂತೆ ಎಲ್ಲೋ ಅಲರ್ಟ್‌ ನೀಡಲಾಗಿದೆ. ಈ ಅವಧಿಯಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿಗೂ ಈ 3 ದಿನಗಳಿಗೆ ಎಲ್ಲೋ ಅಲರ್ಟ್‌ ನೀಡಲಾಗಿದೆ. ಕಾಸರಗೋಡು ಸಹಿತ ಕೇರಳದ ವಿವಿಧೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದೂ ತಿಳಿಸಲಾಗಿದೆ.

ಎಚ್ಚರಿಕೆ ವಹಿಸಲು ಸೂಚನೆ
ಸಮುದ್ರದಲ್ಲಿ ಆ. 23ರಿಂದ 25ರ ವರೆಗೆ ಗಾಳಿಯ ವೇಗ ಹೆಚ್ಚಿರುವ ಸಾಧ್ಯತೆ ಇದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ. ಆದುದರಿಂದ ಕೇರಳ ಮತ್ತು ಕರ್ನಾಟಕ ಕರಾವಳಿಯ ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.