ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕಾಗಿ ಬಂದ ಪತ್ನಿಯನ್ನು ಕೊಲೆಗೈದು,ಆತ್ಮಹತ್ಯೆ ಮಾಡಿಕೊಂಡ ಪತಿ!
Team Udayavani, Aug 22, 2022, 12:38 PM IST
ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ರವಿವಾರ ತಡರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.
ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.