![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 23, 2022, 6:40 AM IST
ಬೆಂಗಳೂರು: ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ/ಪೀಠದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಪ್ರಕಾರ ಧಾರ್ಮಿಕ ವಿಧಿ ಹಾಗೂ ಆಚರಣೆಗಳನ್ನು ನೆರವೇರಿಸಲು ಅವಕಾಶ ಕಲ್ಪಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ಸರಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಶಾಖಾದ್ರಿ ಸಯ್ಯದ್ ಗೌಸ್ ಮೊಹಿದ್ದೀನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾ| ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ವಕೀಲರು ಮೆಮೊ ಸಲ್ಲಿಸಿ ನಿರ್ಣಯದ ಮಾಹಿತಿಯನ್ನು ನೀಡಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರಕಾರದ ನಿರ್ಣಯ ಹಾಗೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಮೆಮೋ ಪ್ರತಿಯನ್ನು ಮೇಲ್ಮನವಿದಾರರಿಗೆ ಒದಗಿಸಲು, ಸರಕಾರದ ನಿರ್ಣಯದ ಬಗ್ಗೆ ಅರ್ಜಿದಾರರಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಹೇಳಿ ಎಂದು ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.
ಅಲ್ಲದೆ, ಸಮಿತಿಯ ನಿರ್ಣಯವು ಈ ಮೇಲ್ಮನವಿ ಕುರಿತ ವಿಭಾಗೀಯ ಪೀಠದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಒಂದೊಮ್ಮೆ ಈ ಅವಧಿಯಲ್ಲಿ ಸರಕಾರವು ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಾನದಲ್ಲಿ ಯಾವುದೇ ಮಾರ್ಪಾಡು ಮಾಡಿದರೆ, ಆ ಕುರಿತು ಪ್ರಶ್ನಿಸಿ ಸೂಕ್ತ ಅರ್ಜಿ ಸಲ್ಲಿಸಲು ಪಕ್ಷಗಾರರಿಗೆ ಅವಕಾಶವಿದೆ ಎಂದು ತಿಳಿಸಿ 2022ರ ಮೇ 31ರಂದು ಹೊರಡಿಸಿರುವ ಆದೇಶವು ಸೆ.5ರ ವರೆಗೆ ಮುಂದುವರಿಯುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.