ನೈಂಟಿ ಬಿಡಿ ಮನೀಗ್ ನಡಿ! : ತೆರೆಯತ್ತ ಬಿರಾದಾರ್ ಅಭಿನಯದ 500ನೇ ಸಿನಿಮಾ
Team Udayavani, Aug 23, 2022, 12:19 PM IST
ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ, ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ವೈಜನಾಥ ಬಿರಾದಾರ್ ಈಗ ಪೂರ್ಣ ಪ್ರಮಾಣದಲ್ಲಿ ನಾಯಕ ನಟರಾಗಿ ತೆರೆಗೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ವೈಜನಾಥ್ ಬಿರಾದಾರ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ಹೊಸ ಸಿನಿಮಾದ ಹೆಸರು “90 ಬಿಡಿ ಮನೀಗ್ ನಡಿ’. ಅಂದಹಾಗೆ, ಇದು ಬಿರಾದಾರ್ ಅಭಿನಯದ 500ನೇ ಸಿನಿಮಾ ಎಂಬುದು ವಿಶೇಷ.
ರತ್ನಮಾಲಾ ಬಾದರದಿನ್ನಿ ನಿರ್ಮಿಸಿರುವ “90 ಬಿಡಿ ಮನೀಗ್ ನಡಿ…’ ಸಿನಿಮಾವನ್ನು ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ವೈಜನಾಥ್ ಬಿರಾದಾರ್ ಅವರೊಂದಿಗೆ ಕರಿಸುಬ್ಬು, ನೀತಾ, ಪ್ರೀತು ಪೂಜಾ, ಧರ್ಮ, ಪ್ರಶಾಂತ್ ಸಿದ್ಧಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಸದ್ದಿಲ್ಲದೆ ಬಹುತೇಕ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ “90 ಬಿಡಿ ಮನೀಗ್ ನಡಿ…’ ಸಿನಿಮಾದ ಟ್ರೇಲರ್ ಮತ್ತು ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಿವು ಬೆರಗಿ ಸಾಹಿತ್ಯ-ಸಂಗೀತವಿದ್ದು, ರವೀಂದ್ರ ಸುರಗಾವಿ ಮತ್ತು ಶಮಿತಾ ಮಲ್ನಾಡ್ ಹಾಡಿಗೆ ಧ್ವನಿಯಾಗಿದ್ದಾರೆ. ಭೂಷಣ್ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದು, ನಟ ಬಿರಾದಾರ್ ಹಾಡಿಗೆ ಮಸ್ತ್ ಸೆಪ್ಟ್ ಹಾಕಿದ್ದಾರೆ.
ಇದೇ ವೇಳೆ ಮಾತನಾಡಿದ ನಟ ವೈಜನಾಥ್ ಬಿರಾದಾರ್, “ರಂಗಭೂಮಿಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಾನು ನಂತರ ಸಿನಿಮಾಕ್ಕೆ ಬಂದೆ. ಇಲ್ಲಿಯವರೆಗೆ 500 ಸಿನಿಮಾಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಅಭಿನಯಿಸಿದ್ದೇನೆ. ಡಾ. ರಾಜಕುಮಾರ್ ಅವರಿಂದ ಹಿಡಿದು ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಉಪೇಂದ್ರ, ದರ್ಶನ್ ಹೀಗೆ ಇಂದಿನ ಅನೇಕ ಸ್ಟಾರ್ ಜೊತೆ ಅಭಿನಯಿಸಿದ್ದೇನೆ. ನಾನೊಬ್ಬ ಕಲಾವಿದ, ಕಲಾಸೇವೆ ಮಾಡುವುದು ನನಗೆ ಖುಷಿ ಕೊಡುತ್ತದೆ. ಈ ಸಿನಿಮಾದಲ್ಲೂ ಕೂಡ ಅಗರಬತ್ತಿ ಮಾರುವ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಪಾತ್ರ ಮತ್ತು ನಿರ್ದೇಶಕರು ಬಯಸಿದ್ದರಿಂದ ಹಾಡಿನಲ್ಲಿ ಕಾಣಿಸಿಕೊಳ್ಳಬೇಕಾಯ್ತು. ತುಂಬಾ ಚೆನ್ನಾಗಿ ಸಿನಿಮಾ ಮತ್ತು ಹಾಡುಗಳು ಮೂಡಿಬಂದಿದ್ದು, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು.
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ, “ಇದೊಂದು ಕಾಮಿಡಿ ಮತ್ತು ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರದ ಸಿನಿಮಾ. ಇಡೀ ಸಿನಿಮಾದ ಶೇಕಡಾ 80ರಷ್ಟು ಭಾಗ ಉತ್ತರ ಕರ್ನಾಟಕದ ಸೊಗಡಿನಲ್ಲಿ ನಡೆಯುತ್ತದೆ. ಇಂಥದ್ದೊಂದು ಪಾತ್ರವನ್ನು ಉತ್ತರ ಕರ್ನಾಟಕದ ಮೂಲದ ಕಲಾವಿದರು ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂಬ ಯೋಚನೆ ನಮ್ಮಲ್ಲಿತ್ತು. ಕೊನೆಗೆ ಈ ಕಥೆಗೆ ಮತ್ತು ಪಾತ್ರಕ್ಕೆ ಬಿರಾದಾರ್ ಅವರೇ ಸೂಕ್ತ ಎನಿಸಿ, ಅವರನ್ನೇ ಹೀರೋ ಆಗಿ ಆಯ್ಕೆ ಮಾಡಿಕೊಂಡೆವು. ಸಂಪೂರ್ಣ ಹಾಸ್ಯಭರಿತವಾಗಿರುವ ಜೊತೆಗೆ ಸಸ್ಪೆನ್ಸ್ ಇರುವಂಥ ಸಿನಿಮಾ ಇದು’ ಎಂದು ಸಿನಿಮಾದ ಕಥಾಹಂದರದ ಬಗ್ಗೆ ಮಾಹಿತಿ ನೀಡಿದರು.
“90 ಬಿಡಿ ಮನೀಗ್ ನಡಿ…’ ಚಿತ್ರಕ್ಕೆ ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತವಿದ್ದು, ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.