ವೀರ ಸಾವರ್ಕರ್ ರನ್ನು ವಿರೋಧಿಸುವವರು ಬಸವಣ್ಣನ ವಚನಗಳನ್ನು ಓದಲಿಕೊಳ್ಳಲಿ: ಬಿಎಸ್ ವೈ
ಸಾವರ್ಕರ್ ರಥಯಾತ್ರೆಗೆ ಚಾಲನೆ
Team Udayavani, Aug 23, 2022, 12:45 PM IST
ಮೈಸೂರು: ಚಿಲ್ಲರೆ ರಾಜಕಾರಣಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರನ್ನು ವಿರೋಧಿಸುವವರು ಬಸವಣ್ಣನ ವಚನಗಳನ್ನು ಓದಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಇಂದು ದೇಶ ಮಹತ್ವದ ಕಾಲಘಟ್ಟದಲ್ಲಿದೆ. ಭಾರತ ವಿಶ್ವಗುರುವಾಗುವತ್ತ ದಾಪುಗಾಲಿಟ್ಟಿದ್ದರೆ, ಅನೇಕ ಸವಾಲುಗಳನ್ನೂ ಎದುರಿಸುತ್ತಿದೆ. ದೇಶದ ಹೆಸರಿಗೆ ಮಸಿ ಬಳಿಯುವ ಕೆಲಸವೂ ನಡೆಯುತ್ತಿದೆ. ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರನಲ್ಲ ಎನ್ನುವವರು ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬ್ರಿಟಿಷರನ್ನು ನಡುಗಿಸಿದದವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಲು ವಿರೋಧಿಸುವವರು ಬಸವಣ್ಣನ ವಚನ ಓದಲಿ. ಚಿಲ್ಲರೆ ರಾಜಕಾರಣಕ್ಕಾಗಿ ಮಸಿ ಬಳಿಯುತ್ತಿರುವುದನ್ನು ನಿಲ್ಲಿಸಲಿ ಎಂದರು.
ತಮ್ಮ ಹೋರಾಟದ ಮೂಲಕವೇ ಬ್ರಿಟಿಷರಿಗೆ ಆಘಾತ ನೀಡಿದವರು ಸಾವರ್ಕರ್. ಸ್ವಾತಂತ್ರ್ಯ ಹೋರಾಟದ ಜತೆಗೆ ಹಿಂದೂಧರ್ಮದ ಸುಧಾರಣೆ, ರಕ್ಷಣೆಯಲ್ಲಿ ತೊಡಗಿಕೊಂಡಿದ್ದವರು. ಅವರು ಸಾಗಿದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು. ವಿಶ್ವದ ಹೋರಾಟಗಳಲ್ಲಿ ಅವರಂತಹ ಹೋರಾಟಗಾರ ಮತ್ತೊಬ್ಬ ಇಲ್ಲ. ದೇಶದ ಅತಿ ಶ್ರೇಷ್ಠ ಹೋರಾಟಗಾರ. ಇಂದಿರಾಗಾಂಧಿ, ರಾಧಾಕೃಷ್ಞನ್ ಸೇರಿದಂತೆ ಹಲವು ಮಹಾನ್ ನಾಯಕರು ಸಾವರ್ಕರ್ ಅವರನ್ನು ಹೊಗಳಿದ್ದಾರೆ ಎಂದರು.
ಸಾವರ್ಕರ್ ಅವರ ಮಾತು, ಮಾರ್ಗದರ್ಶನ ನಮ್ಮೆಲ್ಲರಿಗೂ ದಾರಿದೀಪ. ಅವರ ಚಿಂತನೆಗಳನ್ನು ಜನರಿಗೆ ತಿಳಿಸಲು ಕಟಿಬದ್ಧವಾಗಿ ಹೋರಾಡಬೇಕು. ಯುವಕರಿಗೆ ಇದರ ಅರಿವಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರ ಚಿಂತನೆಗಳನ್ನು ಎಲ್ಲರಿಗುಇ ತಿಳಿಸುವ ಕೆಲಸ ಆಗಬೇಕು ಎಂದರು.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶಿಷ್ಟ ಸ್ಥಾನವಿದೆ. ಸ್ವಾಂತತ್ರ್ಯಾ ನಂತರವೂ ಒಕ್ಕೂಟ ಸೇರಿದ ಮೊದಲ ರಾಜ ಮನೆತನ. ಇಂತಹ ಜಾಗದಲ್ಲಿ ರಥಯಾತ್ರೆಗೆ ಚಾಲನೆ ನೀಡಿರುವುದು ಸೌಭಾಗ್ಯ. 8 ದಿನಗಳ ಯಾತ್ರೆ ಅಷ್ಟ ದಿಕ್ಕುಗಳಲ್ಲೂ ಸಾವರ್ಕರ್ ಅವರ ಸಂದೇಶ, ಜೀವನ ಮೌಲ್ಯ, ದೇಶ ಪ್ರೇಮದ ಸಂದೇಶ ಸಾರಲಿದೆ. ಯುವಶಕ್ತಿ, ರಾಷ್ಟ್ರಪ್ರೇಮಿಗಳನ್ನು ಪ್ರೇರೇಪಿಸಿ, ದೇಶದ ವಿದ್ರೋಹಿಗಳಿಗೆ ಎಚ್ಚರಿಕೆ ನೀಡುವ ಕೆಲಸವನ್ನು ರಥಯಾತ್ರೆ ಮಾಡಲಿದೆ ಎಂದರು.
ಪ್ರತಿಷ್ಠಾನದ ಯಶಸ್ವಿನಿ, ರಥಯಾತ್ರೆಯ ಸಂಚಾಲಕ ರಜತ್, ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣಗೌಡ, ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಕರ್ನಾಟಕ ರಾಜ್ಯ ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಮಾಜಿ ಶಾಸಕ ಸಿ.ರಮೇಶ್, ಕೇಂದ್ರೀಯ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಪಾಲಿಕೆ ಆಡಳಿತ ನಾಯಕ ಶಿವಕುಮಾರ್, ಸದಸ್ಯರಾದ ಎಂ.ಯು.ಸುಬ್ಬಯ್ಯ, ಎಸ್.ಸಾತ್ವಿಕ್, ಬಿ.ವಿ.ಮಂಜುನಾಥ್, ಪ್ರಮೀಳಾಭರತ್, ಮೈಮುಲ್ ನಿರ್ದೇಶಕ ಬಿ.ಎನ್.ಸದಾನಂದ, ಮುಖಂಡರಾದ ನಾಗರಾಜ್ ಮಲ್ಲಾಡಿ, ಬೋ.ಉಮೇಶ್, ಕೆ.ಸಿ.ಲೋಕೇಶ್ ನಾಯಕ, ಎಂ.ಎಸ್.ಧನಂಜಯ, ಯು.ಎಸ್.ಶೇಖರ್, ಕಾ.ಪು.ಸಿದ್ದವೀರಪ್ಪ ಶಿವರಾಮ್, ಎಂ.ಕೆ.ಶಂಕರ್, ಪರಮೇಶ್ ಗೌಡ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.
ರಥಯಾತ್ರೆ 8 ದಿನಗಳ ಕಾಲ ಮೈಸೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರದಲ್ಲಿ ಸಂಚರಿಸಿ 30ರಂದು ಸಮಾರೋಪಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.