ಉಡುಪಿ ಜಿಲ್ಲೆಗೆ ರಜತೋತ್ಸವ ಸಂಭ್ರಮ; ಆಡಳಿತ ಚುಕ್ಕಾಣಿ ಹಿಡಿದ ಮೊದಲ ಮಹಿಳಾ ಸಾರಥಿಗಳು
Team Udayavani, Aug 23, 2022, 1:27 PM IST
ಉಡುಪಿ: ಉಡುಪಿಯಲ್ಲಿ 25 ವರ್ಷಗಳ ಹಿಂದೆ 1997ರ ಆಗಸ್ಟ್ ತಿಂಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಎಂದಿನಂತೆ ಸಾಮಾನ್ಯವಾಗಿರಲಿಲ್ಲ ಅದು ಪ್ರತ್ಯೇಕ ಉಡುಪಿ ಜಿಲ್ಲೆಯಾಗಿ ರೂಪುಗೊಂಡ ಸಮಯ. ಸಂಭ್ರಮದ ಜತೆಗೆ ಆಡಳಿತ ವ್ಯವಸ್ಥೆಗೆ ಹಲವು ಸವಾಲುಗಳೇ ಎದುರಿದ್ದವು.
ಹೊಸ ಜಿಲ್ಲೆಯ ಆಡಳಿತ ಚುಕ್ಕಾಣಿ ಹಿಡಿದದ್ದು ಮಹಿಳಾ ಸಾರಥಿಗಳು ಎಂದರೆ ಅದೊಂದು ವಿಶೇಷವೇ ಸರಿ. ಹೊಸ ಜಿಲ್ಲೆ ರೂಪುಗೊಂಡು ಅದನ್ನು ಮುನ್ನಡೆಸುವುದು ಸಾಮಾನ್ಯ ವಿಷಯವಲ್ಲ. ಅಂಥ ಸಮಯದಲ್ಲಿ ಆಡಳಿತಾತ್ಮಕ ಮತ್ತು ಕಾನೂನು ಸುವ್ಯವಸ್ಥೆಯ ಸವಾಲನ್ನು ಸಮರ್ಥವಾಗಿ ಮುನ್ನಡೆಸಿದವರು ಅಂದಿನ ಜಿಲ್ಲಾಧಿಕಾರಿಯಗಿದ್ದ ಡಾ| ಕಲ್ಪನಾ ಗೋಪಾಲನ್ ಮತ್ತು ಸವಿತಾ ಹಂಡೆ.
ಮೂಲ ಸೌಕರ್ಯ, ಕಂದಾಯ ಸಮಸ್ಯೆ ಪರಿಹಾರಕ್ಕೆ ಡಿಸಿ ಶ್ರಮ
ಬೆಂಗಳೂರಿನ ಡಾ| ಕಲ್ಪನಾ ಗೋಪಾಲನ್ 1987ರ ಬ್ಯಾಚ್‌ನ ಐಎಎಸ್ ಅಧಿಕಾರಿ. ನೂತನ ಜಿಲ್ಲೆ ಆರಂಭಗೊಂಡ ಬಳಿಕ ಸ್ವಲ್ಪ ಕಾಲ ಜಿಲ್ಲಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದರೂ ಜಿಲ್ಲೆಯ ಮೂಲ ಸೌಕರ್ಯ ಮತ್ತು ಕಂದಾಯ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಪ್ರತ್ಯೇಕ ಜಿಲ್ಲೆಯಾದ ಬಳಿಕ ಸ್ಪಷ್ಟ ಅಭಿವೃದ್ಧಿ ದೂರದೃಷ್ಟಿಯನ್ನು ಹೊಂದಿದ್ದ ಅವರು, ಎಲ್ಲ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಜನರ ಆಶೋತ್ತರಗಳಿಗೆ ಸ್ಪಂದಿಸಲು ಪ್ರಯತ್ನಿಸಿದವರು. ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ, ವಿವಿಧ ಇಲಾಖೆಗಳ ಉನ್ನತ ಅಧಿಕಾರಿಯಾಗಿ ಇದೀಗ ನಿವೃತ್ತರಾಗಿದ್ದಾರೆ. ಭಾರತೀಯ ಆಡಳಿತ ಸೇವೆಯಲ್ಲಿ 35 ವರ್ಷಗಳ ಕೆಲಸದ ಅಪಾರ ಅನುಭವ ಪಡೆದಿರುವ ಇವರು ಭೂ ಆಡಳಿತ, ನಗರ ನಿರ್ವಹಣೆ, ಗ್ರಾಮೀಣಾಭಿವೃದ್ಧಿ, ಕ್ರೀಡೆ, ಕಾರ್ಮಿಕ, ಪಶುಸಂಗೋಪನೆ, ಮೀನುಗಾರಿಕೆ, ಸಾರ್ವಜನಿಕ ಕುಂದುಕೊರತೆಗಳು, ಶಿಕ್ಷಣ ಕ್ಷೇತ್ರದ ಶ್ರೇಯೋಭಿವೃದ್ಧಿಗಾಗಿ ಹಲವಾರು ಲೇಖನ, ಸಂಶೋಧನ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.
ದಂಧೆಕೋರರಿಗೆ ಬಿಸಿಮುಟ್ಟಿಸಿದ್ದ ಎಸ್‌ಪಿ
1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಸವಿತಾ ಹಂಡೆ ಅವರು ಮಹಾರಾಷ್ಟ್ರ ಮೂಲದವರು. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲೆಯಲ್ಲಿ ಅವರು ಎಸ್‌ಪಿ ಆದ ಮೇಲೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲು ಶ್ರಮಿಸಿದರು. ಜಿಲ್ಲೆಯಲ್ಲಿ ಕ್ರೈಂ ರೇಟ್ ಕಡಿಮೆ ಇದ್ದರೂ ಜೂಜಾಟ, ಮಟ್ಕಾ ಸಹಿತ ಕೆಲವು ಅಕ್ರಮ ಚಟುವಟಿಕೆಗಳು ಹೆಚ್ಚಿದ್ದವು. ಮುಂಬಯಿ ಭೂಗತ ಜಗತ್ತು ಮತ್ತು ಉಡುಪಿ ಸಂಪರ್ಕವಿರುವ ಹಲವು ಅಕ್ರಮ ಚಟುವಟಿಕೆಗಳ ವಿರುದ್ದ ಕಠಿನ ಕ್ರಮ ತೆಗೆದುಕೊಂಡಿದ್ದರು. ಜಿಲ್ಲೆಯ ಕುಖ್ಯಾತ ಭೂಗತ ಪಾತಕಿಯನ್ನು ಮನೆಗೆ ನುಗ್ಗಿ ಅರೆಸ್ಟ್ ಮಾಡಿದ್ದ ಅವರ ಧೈರ್ಯಕ್ಕೆ ಜನತೆ ಬೆರಗಾಗಿದ್ದರು. ಮಟ್ಕಾ ದಂಧೆ ಹಾವಳಿಗೆ ವಿಶೇಷ ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸಿದ್ದ ಅವರು ಅಕ್ರಮ ದಂಧೆಕೋರರಿಗೆ ಸಿಂಹಿಣಿಯಾಗಿದ್ದರು. ಅನಂತರ ಜಿಲ್ಲೆಯಿಂದ ವರ್ಗಾವಣೆಗೊಂಡ ಅವರು ಕಾಡುಗಳ್ಳ ವೀರಪ್ಪನ್ ಸೆರೆ ಹಿಡಿ ಯುವ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 2000 ಇಸವಿಯಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಂಡು ಪ್ರಸ್ತುತ ಪಾಕಿಸ್ಥಾನದ ಕಾಬುಲ್‌ನಲ್ಲಿ ವಿಶ್ವಸಂಸ್ಥೆ ಭದ್ರತಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.