ಸರ್ಕಾರ ಸಮಯಕ್ಕೆ ಸರಿ ನಿರ್ಧಾರ ಕೈಗೊಳ್ಳುತ್ತಿಲ್ಲ: ಸಚಿವ ನಿತಿನ್ ಗಡ್ಕರಿ
Team Udayavani, Aug 24, 2022, 7:25 AM IST
ಮುಂಬೈ: “ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ’ -ಹೀಗೆ ಹೇಳಿರುವುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ.
ಮುಂಬೈನಲ್ಲಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ.
“ನೀವು ಪವಾಡಗಳನ್ನು ಸೃಷ್ಟಿಸಬಹುದು. ಆ ಸಾಮರ್ಥ್ಯ ಇಲ್ಲಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದೆ. ನಾವು ಅತ್ಯುತ್ತಮ ತಂತ್ರಜ್ಞಾನ, ನಾವಿನ್ಯತೆ, ಸಂಶೋಧನೆಯನ್ನು ಅಳವಡಿಸಿಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಗುಣಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳದೆಯೇ ಪರ್ಯಾಯ ವಸ್ತುಗಳನ್ನು ಬಳಸಬೇಕು. ನಿರ್ಮಾಣಕ್ಕೆ ಸಮಯ ಅತ್ಯಂತ ಮುಖ್ಯವಾಗುತ್ತದೆ. ಸರ್ಕಾರದ ದೊಡ್ಡ ಸಮಸ್ಯೆಯೆಂದರೆ ಸಕಾಲಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು’ ಎಂದರು.
ಈ ಮೂಲಕ ಸಮಯವು ಬೇರೆಲ್ಲ ಸಂಪನ್ಮೂಲಗಳಿಗಿಂತ ಪ್ರಾಮುಖ್ಯತೆ ಹೊಂದಿದೆ ಎಂದು ನಿತಿನ್ ಗಡ್ಕರಿ ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ಪುನಾರಚಿಸಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿಯಿಂದ ಗಡ್ಕರಿ ಅವರನ್ನು ಕೈಬಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.