ಶೀಘ್ರ 5 ಸಾವಿರ ಪೊಲೀಸರ ನೇಮಕ: ಸಚಿವ ಆರಗ ಜ್ಞಾನೇಂದ್ರ
Team Udayavani, Aug 23, 2022, 10:30 PM IST
ಕೋಲಾರ: ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸರ ಅವಶ್ಯಕತೆ ಹೆಚ್ಚಿದ್ದು, ಶೀಘ್ರದಲ್ಲೇ 5 ಸಾವಿರ ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಕೆಜಿಎಫ್ ಪೊಲೀಸ್ ಡಿಎಆರ್ ಆವರಣದಲ್ಲಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಾಗಾರ ಮತ್ತು ಶ್ವಾನದಳ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಕೆಜಿಎಫ್ ಪೋಲಿಸರಿಗೆ ಬ್ರಿಟಿಷರ ಕಾಲದಿಂದಲೂ ದೊಡ್ಡ ಇತಿಹಾಸ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲೂ ಇಲ್ಲದ ಕೋಲಾರ ಜಿಲ್ಲೆಯಲ್ಲಿ 2 ಎಸ್ಪಿ ಕಚೇರಿಗಳಿರುವುದು ವಿಶೇಷ ಎಂದರು.
1902-04 ಅವಧಿ ಯಲ್ಲಿ ಅನೇಕ ಕಟ್ಟಡಗಳು ಈ ತಾಲೂಕಿನಲ್ಲಿ ನಿರ್ಮಾಣವಾಗಿತ್ತು. ಕೆಜಿಎಫ್ ಪೊಲೀಸ್ ಪಡೆಗೆ ಹಿಂದಿನ ಕಾಲದಲ್ಲಿ ಪ್ರತ್ಯೇಕವಾದ ಆಡಳಿತ ಅಧಿಕಾರಿ ಹಾಗೂ ಒಬ್ಬ ಬ್ರಿಟಿಷ್ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಕೆಜಿಎಫ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ವಿಶೇಷ ಭತ್ಯೆಗಳನ್ನು ನೀಡಲಾಗುತ್ತಿತ್ತು. ಕೆಜಿಎಫ್ ಡಿಎಆರ್ ಘಟಕವು 1956ರಲ್ಲಿ ಪ್ರಾರಂಭಗೊಂಡಿತು. ಡಿಎಆರ್ ಘಟಕಕ್ಕಾಗಿ 2.81 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.