ಉಡುಪಿ : ಇಎಸ್‌ಐ ಆಸ್ಪತ್ರೆಗೆ ಜಾಗ ಗುರುತಿಸಲು ಸೂಚನೆ
Team Udayavani, Aug 24, 2022, 12:37 PM IST
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರಕಾರದಿಂದ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆ, ಔಷಧಾಲಯ ನಿರ್ಮಾಣಕ್ಕೆ ಅಗತ್ಯವಿರುವ ಜಮೀನನ್ನು ಆದಷ್ಟು ಶೀಘ್ರದಲ್ಲಿ ಗುರುತಿಸಿ, ಆಸ್ಪತ್ರೆ ಕಾಮಗಾರಿ ಆರಂಭಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹೇಳಿದರು.
ಅವರು ಮಂಗಳವಾರ ವೀಡಿಯೋ ಸಂವಾದದ ಮೂಲಕ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕಾಲು ಸಂಕಗಳನ್ನು ಗುರುತಿಸಿ, ಆ ಭಾಗದಲ್ಲಿ ಸೇತುವೆಗಳನ್ನು ನಿರ್ಮಿ ಸಲು ಆದ್ಯತೆಯ ಮೇರೆಗೆ ಕಾರ್ಯೋ ನ್ಮುಖರಾಗುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯ ಗೊಳ್ಳುವ ಹಾಗೆ ನೋಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮ ಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಲು ಎಲ್ಲ ಕಾಮಗಾರಿ ಗಳಿಗೆ ನೋಡಲ್ ಅಧಿಕಾರಿ ಗಳನ್ನು ನೇಮಿಸುವಂತೆ ಹಾಗೂ ಜಿ.ಪಂ. ಸಿಇಒ ಈ ಬಗ್ಗೆ ವಿಶೇಷ ಗಮನಹರಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, ಹಾನಿಗೀಡಾದ ಶಾಲೆ, ಅಂಗನವಾಡಿಗಳ ದುರ ಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಾನಿಯಾದ ರಸ್ತೆಗಳ ಸಣ್ಣ ಪುಟ್ಟ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ ಎಂದರು.
ಮಾನ್ಸೂನ್ ನಿಂದಾಗಿ ಉಂಟಾ ಗಿರುವ ಹಾನಿ ಹಾಗೂ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿಗಳು, ಪ್ರಾಕೃ ತಿಕ ವಿಕೋ ಪದ ಸಂದರ್ಭ ತುರ್ತು ಅಗತ್ಯವಿರುವ ಬೋಟು, ಲೈಫ್ ಜಾಕೇಟ್, ಲೈಫ್ ಬಾಯ್ ಮತ್ತಿತ್ತರ ಉಪಕರಣಗಳನ್ನು ಸುಮಾರು ರೂ.20 ಲಕ್ಷ ವೆಚ್ಚದಲ್ಲಿ ಖರೀದಿಸಲಾಗಿದ್ದು, ಅದರಂತೆ ಸಂಬಂಧಿತ ಇಲಾಖೆಗಳಿಗೆ ಹಸ್ತಾಂತರಿಸಲಾಗುವುದು ಎಂದರು.
ಮಳೆಯಿಂದ ಹಾನಿಗೊಳಗಾಗುವ ಮನೆಗಳ ವಿವರಗಳನ್ನು ರಾಜೀವ ಗಾಂಧಿ ವಸತಿ ನಿಗ ಮದ ತಂತ್ರಾಂಶದಲ್ಲಿ ದಾಖಲಿಸಲಾಗುತ್ತಿದ್ದು, 2019, 2020, 2021ರ ಸಾಲಿನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುತ್ತಿರುವುದಾಗಿ ಡಿಸಿ ತಿಳಿಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲುಸಂಕ ಅಗತ್ಯವಿರುವ ಕಾಲು ಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದರು. ಜಿ.ಪಂ. ಸಿಇಒ ಪ್ರಸನ್ನ ಎಚ್., ಜಿಲ್ಲೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.