ಲಾಕ್‌ಡೌನ್ ವೇಳೆ ಕಾರ್ಮಿಕರನ್ನು ವಿಮಾನದಲ್ಲಿ ಕಳುಹಿಸಿ ಜನರ ಮನ ಗೆದ್ದಿದ್ದ ರೈತ ಆತ್ಮಹತ್ಯೆ
Team Udayavani, Aug 24, 2022, 12:13 PM IST
ಹೊಸದಿಲ್ಲಿ : ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಉಂಟಾದ ವಲಸೆ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಊರಿಗೆ ಕಳುಹಿಸಿ ಕೊಟ್ಟಿದ್ದ ರೈತನ ಮೃತದೇಹ ಮನೆಯ ಪಕ್ಕದಲ್ಲಿರುವ ದೇವಸ್ಥಾನವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಿಹಾರ ಮೂಲದ ಪಪ್ಪನ್ ಸಿಂಗ್ ಗೆಹ್ಲೋಟ್ (55) ಆತ್ಮಹತ್ಯೆ ಮಾಡಿಕೊಂಡಿರುವ ರೈತ.
ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ, ಅಲ್ಲದೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ತಾನು ಅನಾರೋಗ್ಯದಿಂದ ಬಳಲುತ್ತಿರುವ ಕುರಿತು ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದುಕೊಂಡಿದ್ದಾರೆ, ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಮರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪಪ್ಪನ್ ಸಿಂಗ್ ಕಳೆದ 2020 ರಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಸರಕಾರ ಲಾಕ್‌ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಊರಿಗೆ ತೆರಳಲಾಗದೆ ಬಿಹಾರದಲ್ಲೇ ಸಾವಿರಾರು ವಲಸಿಗರು ಪರದಾಡುತ್ತಿದ್ದರು ಈ ವೇಳೆ ಬಿಹಾರದ ರೈತ ಪಪ್ಪನ್ ಸಿಂಗ್ ಗೆಹ್ಲೋಟ್ ಅವರು ತಮ್ಮ ಉದ್ಯೋಗಿಗಳಿಗೆ ತಮ್ಮ ಮನೆಗಳಿಗೆ ಮರಳಲು ವಿಮಾನ ಟಿಕೆಟ್‌ಗಳನ್ನು ಖರೀದಿಸಿ ಅವರನ್ನು ಊರಿಗೆ ಕಳುಹಿಸುವ ಮೂಲಕ ದೇಶದ ಜನರ ಗಮನ ಸೆಳೆದಿದ್ದರು.
ಇದನ್ನೂ ಓದಿ : ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ: ದಂಪತಿ ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.