ಸ್ಟೀಲ್ ಸೇತುವೆ ಬಿಜೆಪಿ ಸರ್ಕಾರದ 40% ದಂಧೆಯ ಅಕ್ರಮ ಶಿಶು: ಆಪ್ ಆರೋಪ
19 ಕೋಟಿ ರೂಪಾಯಿಯಾಗಿದ್ದ ಕಾಮಗಾರಿ ಮೊತ್ತವು ಈಗ ಬರೋಬ್ಬರಿ 39 ಕೋಟಿ ರೂಪಾಯಿಗೆ ಏರಿಕೆ
Team Udayavani, Aug 24, 2022, 3:25 PM IST
ಬೆಂಗಳೂರು : ಬೆಂಗಳೂರಿನ ಶಿವಾನಂದ ವೃತ್ತದಲ್ಲಿ 39 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್ ಬ್ರಿಡ್ಜ್ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯ ಅಕ್ರಮ ಶಿಶು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿವಾನಂದ ವೃತ್ತದ ಸ್ಟೀಲ್ ಸೇತುವೆಯನ್ನು ಕಳಪೆ ಗುಣಮಟ್ಟದ ಬೇರಿಂಗ್, ಶಾಕ್ ಅಬ್ಸಾರ್ವರ್ ಬಳಸಿ ನಿರ್ಮಿಸಲಾಗಿದೆ. ಆಗಸ್ಟ್ 15ರಿಂದ ಒಂದು ಬದಿಯ ಸಂಚಾರ ಆರಂಭವಾಗಿದ್ದು, ಅಲ್ಲಿ ಸಂಚರಿಸಿದರೆ ಕಳಪೆ ಕಾಮಗಾರಿ ಸ್ಪಷ್ಟವಾಗುತ್ತಿದೆ. ಸೇತುವೆಯಲ್ಲಿ ಸುಮಾರು 20 ಮೀಟರ್‌ಗೊಮ್ಮೆ ಜಾಯಿಂಟ್‌ಗಳಿದ್ದು, ಅಲ್ಲಿ ವಾಹನ ಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪ್ ಗಳನ್ನು ನಿರ್ಮಿಸಲಾಗಿದೆ. ಲಘು ವಾಹನ ಸಂಚರಿಸಿದರೂ ಸೇತುವೆ ವೈಬ್ರೇಟ್ ಆಗುತ್ತಿದೆ” ಎಂದು ಆರೋಪಿಸಿದರು.
“ಆಗಸ್ಟ್ 30ರಂದು ಶಿವಾನಂದ ವೃತ್ತದ ಸ್ಟೀಲ್ ಸೇತುವೆಯು ಪೂರ್ಣಪ್ರಮಾಣದಲ್ಲಿ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ. ಆಮ್ ಆದ್ಮಿ ಪಾರ್ಟಿಯು ಅದರ ಹಿಂದಿನ ದಿನವಾದ ಆಗಸ್ಟ್ 29ರಂದು ಉದ್ಘಾಟನೆಯ ಅಣಕು ಪ್ರದರ್ಶನ ನಡೆಸಿ ಕಳಪೆ ಕಾಮಗಾರಿಯನ್ನು ಬಯಲು ಮಾಡಲಿದೆ. ಈ ಮೂಲಕ ಭ್ರಷ್ಟ ಬಿಜೆಪಿ ಸರ್ಕಾರದ ಅವ್ಯವಹಾರದ ಕುರಿತು ಜನಜಾಗೃತಿ ಮೂಡಿಸುತ್ತೇವೆ” ಎಂದು ತಿಳಿಸಿದರು.
2017ರಲ್ಲಿ ಆರಂಭವಾದ ಕಾಮಗಾರಿಯು ಪೂರ್ಣಗೊಳ್ಳಲು ಇಷ್ಟು ವರ್ಷಗಳ ಸಮಯ ತೆಗೆದುಕೊಂಡಿರುವುದು ದುರಂತ. ಆರಂಭದಲ್ಲಿ ಕೇವಲ 19 ಕೋಟಿ ರೂಪಾಯಿಯಾಗಿದ್ದ ಕಾಮಗಾರಿ ಮೊತ್ತವು ಈಗ ಬರೋಬ್ಬರಿ 39 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರವು 2000 ಕೋಟಿ ರೂ. ವೆಚ್ಚದಲ್ಲಿ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಸ್ಟೀಲ್ ಸೇತುವೆ ನಿರ್ಮಾಣ ನೆಪದಲ್ಲಿ ಲೂಟಿಗೆ ಮುಂದಾದಾಗ ಎಎಪಿ ಹಾಗೂ ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಆಗ ಸಿದ್ದರಾಮಯ್ಯನವರ ವಿರುದ್ಧ 500 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಇದರಿಂದ ಪ್ರೇರಣೆಗೊಂಡ ಬಿಜೆಪಿ ಸರ್ಕಾರವು ಅಕ್ರಮ ನಡೆಸಲೆಂದೇ ಸ್ಟೀಲ್ ಸೇತುವೆಯನ್ನು ಪೂರ್ಣಗೊಳಿಸಿದೆ” ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಶೇ. 40ರಷ್ಟಿದ್ದ ಕಮಿಷನ್ ಈಗ ಶೇ. 50ಕ್ಕೆ ಏರಿಕೆಯಾಗಿದೆ ಎಂದು ಬಿಬಿಎಂಪಿಯ ಆಯುಕ್ತರಿಗೆ ಬಿಬಿಎಂಪಿ ಕಾರ್ಯನಿರತ ಪತ್ರಕರ್ತರ ಸಂಘವು ದೂರು ಸಲ್ಲಿಸಿರುವುದು ಆಘಾತಕಾರಿ. ಕಮಿಷನ್ ನೀಡಲು ಒಪ್ಪದ ಕಾರಣಕ್ಕಾಗಿ ಹಲವು ಗುತ್ತಿಗೆದಾರರಿಗೆ 22 ತಿಂಗಳುಗಳಿಂದ ಬಿಲ್ ಪಾವತಿಯಾಗಿಲ್ಲ. ಕಮಿಷನ್ ದಂಧೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ಬಿಜೆಪಿಯು ತಲೆಕೆಡಿಸಿಕೊಳ್ಳದೇ, ಕಮಿಷನ್ ಹೆಚ್ಚಿಸುವುದರಲ್ಲಿ ನಿರತವಾಗಿದೆ” ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.