ಪತಿಗೆ ಮಂಗಳಮುಖಿ ಜತೆ ಸಂಪರ್ಕ: ಗಗನಸಖಿ ದೂರು

Team Udayavani, Aug 24, 2022, 4:46 PM IST

12

ಬೆಂಗಳೂರು: ಗಗನಸಖಿಯೊಬ್ಬಳು ಮೆಚ್ಚಿ ವಿವಾಹವಾಗಿದ್ದ ಪೈಲೆಟ್‌ ಮಂಗಳಮುಖಿಗಳ ಜತೆ ಸಂಪರ್ಕ ಬೆಳೆಸಿ ಪತ್ನಿಯ ಬೆರಳು ಮುರಿದಿದ್ದು, ನ್ಯಾಯಕ್ಕಾಗಿ ಗಗನಸಖಿ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

ಯಲಹಂಕ ನಿವಾಸಿ 30 ವರ್ಷದ ಗಗನಸಖಿ ನೀಡಿದ ದೂರಿನ ಆಧಾರದ ಮೇಲೆ ಆಕೆಯ ಪತಿ ಉತ್ತರ ಭಾರತ ಮೂಲದ 34 ವರ್ಷದ ಪೈಲೆಟ್‌ ವಿರುದ್ಧ ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ದೂರು ನೀಡಿದ ಸಂತ್ರಸ್ತೆ ವಿಮಾನವೊಂದರಲ್ಲಿ ಗಗನಸಖಿಯಾಗಿದ್ದಾರೆ. ಈಕೆಯ ಪತಿ ಪ್ರಸಿದ್ಧ ಸಂಸ್ಥೆಗೆ ಸೇರಿದ ವಿಮಾನದಲ್ಲಿ ಪೈಲೆಟ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. 2020 ನವೆಂಬರ್‌ನಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ಇಬ್ಬರೂ ಪಾಲಕರ ಸಮ್ಮುಖದಲ್ಲೇ ವಿವಾಹವಾಗಿದ್ದರು. ವಿವಾಹವಾದ ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು.

ಇದಾದ ಕೆಲ ಸಮಯದ ಬಳಿಕ ಪೈಲೆಟ್‌, ಮನೆಯ ಖರ್ಚು ವೆಚ್ಚಗಳನ್ನು ಪತ್ನಿಗೆ ವಹಿಸಿ ಸಣ್ಣ-ಪುಟ್ಟ ವಿಚಾರಕ್ಕೂ ಪತ್ನಿ ಜತೆ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ.

ಇದಲ್ಲದೇ, ಪತಿ ತನ್ನ ಜತೆ ದೈಹಿಕ ಸಂಪರ್ಕ ಹೊಂದಲು ನಿಶಕ್ತನಾಗಿದ್ದ. ಇತ್ತೀಚೆಗೆ ಅನುಮಾನದ ಮೇರೆಗೆ ಪತಿಯ ಮೊಬೈಲ್‌ ಪರಿಶೀಲಿಸಿದಾಗ, ಅಶ್ಲೀಲ ವಿಡಿಯೋ ನೋಡುವ ಚಟ ಹೊಂದಿರುವುದು ಹಾಗೂ ಹಲವಾರು ಟ್ರಾನ್ಸ್‌ಜೆಂಡರ್ಸ್‌ಗಳ ಜತೆ ವಿಡಿಯೋ ಕರೆ ಮೂಲಕ ಮಾತನಾಡಿರುವ ವಿಚಾರ ಗೊತ್ತಾಗಿದೆ. ಮಂಗಳಮುಖಿಗಳ ಸಂಪರ್ಕದಲ್ಲಿ ಇರುವುದಲ್ಲದೇ, ಹಲವು ಯುವತಿಯರಿಗೆ ಹಣ ವರ್ಗಾವಣೆ ಮಾಡಿರುವ ಸ್ಟ್ರೀನ್‌ ಶಾಟ್‌ಗಳು ಪತಿಯ ಫೋನ್‌ನಲ್ಲಿರುವುದನ್ನು ನೋಡಿ ಆಘಾತ ಉಂಟಾಗಿದೆ ಎಂದು ಗಗನಸಖಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖೀಸಿದ್ದಾಳೆ.

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.