ಇಂಗ್ಲೆಂಡ್ ತಂಡ ಪ್ರಕಟ: ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಸರಣಿ ಸಮಬಲಕ್ಕೆ ಪ್ರಯತ್ನ
ದ್ವಿತೀಯ ಟೆಸ್ಟ್
Team Udayavani, Aug 24, 2022, 11:53 PM IST
ಮ್ಯಾಂಚೆಸ್ಟರ್: ಮೊದಲ ಟೆಸ್ಟ್‌ನಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದೆದುರು ಇನ್ನಿಂಗ್ಸ್ ಸೋಲಿನ ಆಘಾತಕ್ಕೆ ಒಳಗಾಗಿದ್ದ ಇಂಗ್ಲೆಂಡ್ ತಂಡವು ಗುರುವಾರದಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗುವ ದ್ವಿತೀಯ ಟೆಸ್ಟ್‌ಗೆ ತಂಡವನ್ನು ಪ್ರಕಟಿಸಿದ್ದು ಒಂದು ಬದಲಾವಣೆ ಮಾಡಿಕೊಂಡಿದೆ.
ಸರಣಿಯನ್ನು ಸಮಬಲಗೊಳಿಸುವ ಗುರಿಯೊಂದಿಗೆ ಕಣಕ್ಕೆ ಇಳಿಯಲಿರುವ ಇಂಗ್ಲೆಂಡ್ ತಂಡವು ವೇಗಿ ಒಲೀ ರಾಬಿನ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಹೋರಾಟಕ್ಕೆ ಕೇವಲ ಒಂದು ದಿನವಿರುವಾಗ ಆತಿಥೇಯ ತಂಡವು ಆಟವಾಡುವ ಬಳಗವನ್ನು ಅಂತಿಮಗೊಳಿಸಿದೆ. ಮೊದಲ ಟೆಸ್ಟ್‌ನಲ್ಲಿ ಆಡಿದ ಬಹುತೇಕ ಎಲ್ಲ ಆಟಗಾರರು ಕಣದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ವೇಗಿ ಓಲೀ ರಾಬಿನ್ಸನ್ ಅವರು ಮ್ಯಾಥ್ಯೂ ಪಾಟ್ಸ್ ಅವರ ಬದಲಿಗೆ ತಂಡವನ್ನು ಸೇರಿಕೊಂಡಿದ್ದಾರೆ. ಜೇಮ್ಸ್ ಆ್ಯಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ವೇಗದ ದಾಳಿಯ ನೇತೃತ್ವ ವಹಿಸಲಿದ್ದರೆ ಜಾಕ್ ಲೀಚ್ ಸ್ಪಿನ್ ವಿಭಾಗವನ್ನು ನೋಡಿಕೊಳ್ಳಲಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಅಲೆಕ್ಸ್ ಲೀಸ್ ಮತ್ತು ಜಾಕ್ ಕ್ರಾಲಿ ಉತ್ತಮ ಆರಂಭ ನೀಡುವ ನಿರೀಕ್ಷೆಯಿದೆ. ಅಗ್ರ ರ್‍ಯಾಂಕಿನ ಆಟಗಾರ ಜೋ ರೂಟ್ ಈ ಪಂದ್ಯದಲ್ಲಾದರೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ವಿಶ್ವಾಸವಿದೆ. ಇದೇ ವೇಳೆ ಜಾನಿ ಬೇರ್‌ಸ್ಟೋ ಮತ್ತು ನಾಯಕ ಬೆನ್ ಸ್ಟೋಕ್ಸ್ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅಗತ್ಯವಿದೆ.
ಸರಣಿ ಗೆಲುವಿನ ವಿಶ್ವಾಸ
ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್‌ನಲ್ಲಿ ಜಯಭೇರಿ ಬಾರಿಸಿ ಸರಣಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಡೀನ್ ಎಲ್ಗರ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಇನ್ನಿಂಗ್ಸ್ ಮತ್ತು 12 ರನ್ನುಗಳಿಂದ ಗೆಲ್ಲುವ ಮೂಲಕ ಇಂಗ್ಲೆಂಡಿನ ಸತತ ಗೆಲುವಿನ ಸರಮಾಲೆಗೆ ಬ್ರೇಕ್ ಹಾಕಿತ್ತು. ಮೊದಲ ಟೆಸ್ಟ್ ಮೊದಲು ಇಂಗ್ಲೆಂಡ್ ತಂಡವು ಬೆನ್ ಸ್ಟೋಕ್ಸ್ ಮತ್ತು ರೆಡ್ ಬಾಲ್ ಕೋಚ್ ಬ್ರೆಂಡನ್ ಮೆಕಲಮ್ ಹುದ್ದೆ ಸ್ವೀಕರಿಸಿದ ಬಳಿಕ ತವರಿನಲ್ಲಿ ನಡೆದ ಕಳೆದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿತ್ತು.
ಸದ್ಯ ಐಸಿಸಿ ಡಬ್ಲ್ಯುಟಿಸಿ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ದ್ವಿತೀಯ ಟೆಸ್ಟ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ನಂಬರ್ ವನ್ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.
ದ್ವಿತೀಯ ಟೆಸ್ಟ್‌ಗೆ ಇಂಗ್ಲೆಂಡ್ ತಂಡ
ಅಲೆಕ್ಸ್ ಲೀಸ್, ಜಾಕ್ ಕ್ರಾಲಿ, ಓಲೀ ಪೋಪ್, ಜೋ ರೂಟ್, ಜಾನಿ ಬೇರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್, ಓಲೀ ರಾಬಿನ್ಸನ್, ಜಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.