ಕೆಂಪಣ್ಣ ವಿರುದ್ಧ ರಾಜಕೀಯ ತಿರುಗೇಟು: ಸಂಪುಟ ಸಭೆಯಲ್ಲಿ ಭಾರಿ ಚರ್ಚೆ

ರಾಜ್ಯದ 224 ಶಾಸಕರೂ ಭ್ರಷ್ಟರು ಎಂದಿದ್ದಾರೆ..

Team Udayavani, Aug 25, 2022, 3:25 PM IST

madhuswami

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಕೆಂಪಣ್ಣ ಹಾಗೂ ಕಾಂಗ್ರೆಸ್ ಮಾಡುತ್ತಿರುವ 40 % ಕಮಿಷನ್ ವಿರುದ್ಧ ರಾಜಕೀಯವಾಗಿಯೇ ತಿರುಗೇಟು ನೀಡಲು ರಾಜ್ಯ ಸರಕಾರ ನಿರ್ಧರಿಸಿದ್ದು, ಸಂಪುಟ ಸಭೆಯಲ್ಲಿ ಭಾರಿ ಚರ್ಚೆ ನಡೆದಿದೆ.

ಕೆಂಪಣ್ಣ ಯಾರ್ರೀ ? ಎಲ್ಲಿ ಕಾಂಟ್ರಾಕ್ಟ್ ಮಾಡಿದ್ದಾರೆ ? ಎಂಬ ಬಗ್ಗೆ ಮಾಹಿತಿಯೇ ಇಲ್ಲ ? ಕೆಂಪಣ್ಣ ಗುತ್ತಿಗೆದಾರನೇ ಅಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ 224 ಶಾಸಕರೂ ಭ್ರಷ್ಟರು ಎಂದು ಅವರು ಆರೋಪಿಸಿದ್ದಾರೆ. ಅದನ್ನು ಒಪ್ಪಲು ಸಾಧ್ಯವೇ ? ಗೊತ್ತು ಗುರಿ ಇಲ್ಲದೇ ಈ ರೀತಿ ಆರೋಪ ಮಾಡುತ್ತಾ ಹೋದರೆ ಉತ್ತರಿಸಲು ಸಾಧ್ಯವೇ ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯ ಅವರು ಕೆಲವೊಮ್ಮೆ ಹೇಳಿಕೆ ನೀಡಿಬಿಡುತ್ತಾರೆ. ಅದಕ್ಕೆ ಉತ್ತರಿಸುವುದಕ್ಕೆ ಸಾಧ್ಯವಿಲ್ಲ. ಆತ ಆಪಾದನೆ ಮಾಡಿದ ಕಾರಣಕ್ಕೆ ನ್ಯಾಯಾಂಗ ತನಿಖೆ ನಡೆಸುವುದಕ್ಕೆ ಸಾಧ್ಯವೇ ? ಮಾಹಿತಿ ಇದ್ದರೆ ಮೊದಲು ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಸವಾಲು ಹಾಕಿದರು.

ಸುಪ್ರೀಂಗೆ ಮೇಲ್ಮನವಿ ಸಲ್ಲಿಸದೇ ಇರಲು ನಿರ್ಧಾರ

ಎಸಿಬಿ ರದ್ದು ಮಾಡುವಂತೆ ಹೈ ಕೋರ್ಟ್ ನೀಡಿದ ಆದೇಶದ ವಿರುದ್ಧ ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಹೋಗದೇ ಇರಲು ರಾಜ್ಯ ಸರಕಾರ ತೀರ್ಮಾನಿಸಿದೆ.ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು ಲೋಕಾಯುಕ್ತವನ್ನು ಬಲಪಡಿಸುವುದಕ್ಕೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಲೋಕಾಯುಕ್ತವನ್ನು ಬಲಪಡಿಸುವುದಕ್ಕೆ ನಾವು ಎಲ್ಲ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತೇವೆ.‌‌ ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಯ ಜತೆ ಮಾತನಾಡಿದ್ದೇವೆ. ತನಿಖೆಗೆ ಅನುಮತಿ ನೀಡುವುದು, ಅಕೌಂಟ್ ಸೇರಿದಂತೆ ಹಲವು ಅಧಿಕಾರ ನೀಡಲಾಗುತ್ತದೆ ಎಂದು ಹೇಳಿದರು.

ಎಸಿಬಿ ರದ್ದು ಮಾಡಿರುವುದರ ವಿರುದ್ಧ ರಾಜ್ಯ ಸರಕಾರ ಸುಪ್ರೀಂ‌ಕೋರ್ಟ್ ಗೆ ಮೇಲ್ಮನವಿ ಹೋಗುವುದಿಲ್ಲ. ಲೋಕಾಯುಕ್ತವನ್ನೇ ನಾವು ಬಲಪಡಿಸುತ್ತೇವೆ. ಎಸಿಬಿಯಲ್ಲಿ ಈಗ ಯಾವುದೇ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.