ಬೇಡಿಕೆ ಈಡೇರಿಸಲು ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Team Udayavani, Aug 25, 2022, 5:12 PM IST
ಮಾನ್ವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ ಅವರನ್ನು ಶಿಕ್ಷಕರೆಂದು ನೇಮಕ ಮಾಡಿಕೊಳ್ಳಬೇಕು ಹಾಗೂ ಸರಕಾರದಿಂದ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ತಾಲೂಕು ಅಧ್ಯಕ್ಷೆ ಕಾಂ.ಚನ್ನಮ್ಮ ಗುತ್ತೆದಾರ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರಕಾರದಿಂದ ಗ್ರಾಚ್ಯುಯುಟಿ ಸೌಲಭ್ಯ ನೀಡಬೇಕು. ಪ್ರಭಾರಿ ಭತ್ಯ ಹೆಚ್ಚಳ ಮಾಡಬೇಕು. ವೈದ್ಯಕೀಯ ವೆಚ್ಚ ನೀಡಬೇಕು. ಮಿನಿ ಅಂಗನವಾಡಿಗಳಿಗೆ ಸಹಾಕಿಯರನ್ನು ಕೂಡಲೇ ನೇಮಕ ಮಾಡಬೇಕು. ತಾಲೂಕಿನ ಎಲ್ಲ ಅಂಗನವಾಡಿಗಳಲ್ಲಿ ಮಕ್ಕಳಿಗೆ ಪ್ರಾಥಮಿಕ ವಿದ್ಯಾಭ್ಯಾಸಕ್ಕಾಗಿ ಎಲ್. ಕೆ.ಜಿ, ಯು.ಕೆ.ಜಿ ಶಿಕ್ಷಣ ನೀಡಲು ಅಗತ್ಯ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ಸಮವಸ್ತ್ರ, ಪಠ್ಯ-ಪುಸ್ತಕ ವಿತರಿಸಬೇಕು ಎಂದು ಒತ್ತಾಯಿಸಿದರು.
ನೂರ್ ಜಾಹನ್, ಪ್ರಭಾವತಿ, ಯಲ್ಲಮ್ಮ, ಸುಶೀಲಾ, ಮಂಜುಳಾ, ಭಾಗ್ಯ, ಜರೀನಾಬೇಗಂ, ಶಾರದ ಕಾಂ. ವಿಶಾಲಕ್ಷ್ಮೀ, ಶಾಂತ, ರೇಣುಕಾ, ನಾಗಮ್ಮ, ಲಿಂಗಮ್ಮ, ಯಲ್ಲಮ್ಮ, ಪುಟ್ಟಮ್ಮ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.