ಛಾಯಾಗ್ರಾಹಕರು ಮೊದಲು ಸಂಘಟಿತರಾಗಿ: ಅಶೋಕ್
ಶಿಲ್ಪಿಗಳು ಇತಿಹಾಸವನ್ನು ಉಳಿಸುವುದರಲ್ಲಿ ಪ್ರಮುಖರಾಗಿದ್ದಾರೆ
Team Udayavani, Aug 25, 2022, 2:25 PM IST
ಹಗರಿಬೊಮ್ಮನಹಳ್ಳಿ: ಛಾಯಾಗ್ರಾಹಕರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು ಎಲ್ಲರೂ ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯಗಳು ಪಡೆದುಕೊಳ್ಳಿ ಎಂದು ಪತ್ರಕರ್ತ ಅಶೋಕ್ ಉಪ್ಪಾರ್ ಛಾಯಾಗ್ರಹಕರಿಗೆ ಕರೆ ನೀಡಿದರು.
ಪಟ್ಟಣದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ 183ನೇ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ಛಾಯಾಗ್ರಾಹಕರು ಬರಹಗಾರರು ಹಾಗೂ ಶಿಲ್ಪಿಗಳು ಇತಿಹಾಸವನ್ನು ಉಳಿಸುವುದರಲ್ಲಿ ಪ್ರಮುಖರಾಗಿದ್ದಾರೆ. ಅವರಿಲ್ಲದೆ ಇತಿಹಾಸ ಮುಂದಿನ ಪೀಳಿಗೆಗೆ ಕಾಣಿಕೆಯಾಗಿ ಕೊಡಲು ಸಾಧ್ಯವಿಲ್ಲ ಎಂದರು.
ಹಿರಿಯ ಛಾಯಾಗ್ರಹಕ ಮಹೇಶ್ ಜಿಟ್ಟಿ ಮಾತನಾಡಿ, ಮೊಬೈಲ್ ಹಾವಳಿ ಹಾಗೂ ಡಿಜಿಟಲ್ ಹಿನ್ನೆಲೆಯಲ್ಲಿ ಛಾಯಾಗ್ರಾಹಕರು ಸಾಕಷ್ಟು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪೈಪೋಟಿ ನಡುವೆಯೂ ನಾವು ಉಳಿಯಬೇಕಾಗಿದೆ. ಸರ್ಕಾರ ನಮ್ಮ ಬಗ್ಗೆ ಕಾಳಜಿವಹಿಸಿ ಸೌಲಭ್ಯಗಳನ್ನು
ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಹೊಸಪೇಟೆಯ ಖಾಜಾಪೀರ್ ಕಾರ್ಯಕ್ರಮ ಉದ್ಘಾಟಿಸಿ, ಛಯಾಗ್ರಾಹಕರ ಜೀವನ ಮತ್ತು ಶೈಲಿ ಕುರಿತು ಮಾತನಾಡಿದರು. ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಕೆ.ಎಂ. ಶಿವಶಂಕರ್ ಸ್ವಾಮಿ ನಿರ್ವಹಿಸಿದರು. ಕಠಾರೆ ಆಪ್ಟಿಕಲ್ಸ್‌ನ ಸಿ.ಎ.ಮೋಹನ್, ಬೆಂಗಳೂರಿನ ಪ್ಯಾನಾಸೋನಿಕ್ ಮ್ಯಾನೇಜರ್ ಚೇತನ್, ಬೆಂಗಳೂರಿನ ಚಿನ್ನು ಫೋಟೋ ಬುಕ್ ಮಾಲೀಕ ಮಲ್ಲೇಶ್
ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.