![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 25, 2022, 6:32 PM IST
ಬೀದರ: ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರದಿಂದ ಇರುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಆರೋಗ್ಯ ಸೇವೆಯಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಆರ್ ಕರ್ನೂಲ್ ಹೇಳಿದರು.
ನಗರದ ಬ್ರಿಮ್ಸ್ ಆಸ್ಪತ್ರೆಗೆ ಆಕಸ್ಮಿಕ ಭೇಟಿ ನೀಡಿ, ಅಲ್ಲಿಯ ಸ್ಥಿತಿಗತಿಗಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಹಾಜರಾತಿ ಪುಸ್ತಕವನ್ನು ವೀಕ್ಷಿಸಿ, ಕೆಲವು ವೈದ್ಯಾಧಿಕಾರಿಗಳು ರುಜು ಹಾಕದೇ ಇರುವುದನ್ನು ಕಂಡು ಪ್ರತಿದಿನ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾತಿ ಪುಸ್ತಕದಲ್ಲಿ ರುಜು ಮಾಡುವುದು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯವರ ಚಲನವಲನ ರಜಿಸ್ಟರ್ ಹಾಗೂ ನಗದು ನೀಡಿ ಪುಸ್ತಕ ನಿರ್ವಹಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಸೂಚಿಸಿದರು.
ಆಸ್ಪತ್ರೆಯ ವಾರ್ಡ್‌ಗಳಲ್ಲಿ ಸ್ವಚ್ಛತೆ ಕಾಪಾಡುವುದು, ಆಯುಷ್ಮಾನ ಯೋಜನೆಯಡಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಹಾಗೂ ಉಳಿದ ಆಯುಷ್ಮಾನ ಕಾರ್ಡ್‌ಗಳನ್ನು ವಿತರಣೆ ಮಾಡುವುದು, ಔಷಧ ವಿತರಣಾ ಸಹಿಗಳನ್ನು ಸರಿಯಾಗಿ ನಿರ್ವಹಿಸುವುದು ಹಾಗೂ ಆಸ್ಪತ್ರೆಯ ಆವರಣದ ಶೌಚಾಲಯವನ್ನು ಶುಚಿತ್ವ ಕಾಪಾಡಲು ಹಾಗೂ ಕೋವಿಡ್ ಮುಂಜಾಗ್ರತೆ ಕ್ರಮ ವಹಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೀದರ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎನ್.ಎಂ. ಓಲೇಕಾರ, ಪೊಲೀಸ್ ನಿರೀಕ್ಷಕರಾದ ಡಿ.ಬಿ. ಕಟ್ಟಿಮನಿ, ಅಮರೇಶ ಬಿ.ಹೂಗಾರ ಹಾಗೂ ಸಿಬ್ಬಂದಿ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.