36ರ ವ್ಯಕ್ತಿಗೆ ಏಕಕಾಲಕ್ಕೆ ಕೊರೊನಾ, ಮಂಕಿಪಾಕ್ಸ್, ಎಚ್‌ಐವಿ ಪಾಸಿಟಿವ್
Team Udayavani, Aug 26, 2022, 7:40 AM IST
ರೋಮ್: ಜಗತ್ತಿನಲ್ಲೇ ಮೊದಲ ಬಾರಿಗೆ ಇಟಲಿಯ 36 ವರ್ಷದ ಯುವಕನೊಬ್ಬನಿಗೆ ಏಕಕಾಲಕ್ಕೆ ಕೊರೊನಾ, ಮಂಕಿಪಾಕ್ಸ್ ಹಾಗೂ ಎಚ್‌ಐವಿ ಸೋಂಕು ತಗುಲಿದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ಸ್ಪೇನ್ ಪ್ರವಾಸದಿಂದ ಮರಳಿದ 9 ದಿನಗಳಲ್ಲೇ ಈ ಯುವಕನಿಗೆ ಜ್ವರ, ಗಂಟಲು ನೋವು, ಬಳಲಿಕೆ, ತಲೆನೋವು ಮತ್ತು ತೊಡೆಸಂದಿನಲ್ಲಿ ಉರಿ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ರೋಗಲಕ್ಷಣಗಳು ಕಂಡುಬಂದ ಮೂರು ದಿನಗಳಲ್ಲೇ ಈತನಿಗೆ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂತು.
ಇದೇ ವೇಳೆ, ಆತನ ಮುಖ ಹಾಗೂ ದೇಹದ ಇತರೆ ಭಾಗದ ಚರ್ಮದಲ್ಲಿ ದದ್ದುಗಳು ಹಾಗೂ ಗುಳ್ಳೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಯಿತು. ಆಗ ಆತನ ಯಕೃತ್ತು, ಸ್ಪ್ಲೀನ್ ಮತ್ತಿತರ ಅಂಗಗಳು ಊದಿಕೊಂಡಿರುವುದು ಕೂಡ ಗಮನಕ್ಕೆ ಬಂದಿದೆ. ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ, ಆ ವ್ಯಕ್ತಿಗೆ ಕೊರೊನಾ ಮಾತ್ರವಲ್ಲದೇ, ಮಂಕಿಪಾಕ್ಸ್ ಸೋಂಕು ಹಾಗೂ ಎಚ್‌ಐವಿ ಸೋಂಕು ಕೂಡ ಇರುವುದು ದೃಢಪಟ್ಟಿದೆ. ಈತ ಫೈಜರ್ ಕಂಪನಿಯ ಎಂಆರ್‌ಎನ್‌ಎ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದ.
ಮೂರೂ ಸೋಂಕುಗಳಿಗೆ ಚಿಕಿತ್ಸೆ ಆರಂಭಿಸಿದ ಬಳಿಕ ಒಂದೇ ವಾರದಲ್ಲಿ ಈತ ಗುಣಮುಖನಾಗಿ ಡಿಸಾcರ್ಜ್ ಆಗಿದ್ದ. ಮಂಕಿಪಾಕ್ಸ್ ಮತ್ತು ಕೊರೊನಾ ವರದಿ ನೆಗೆಟಿವ್ ಎಂದು ಬಂದಿದ್ದು, ಎಚ್‌ಐವಿ ಸೋಂಕಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.