ಪ್ರತಿಪಕ್ಷವಾಗಿ ಧ್ವನಿ ಎತ್ತೋದೆ ತಪ್ಪಾ? : ಡಿ.ಕೆ.ಶಿವಕುಮಾರ್‌


Team Udayavani, Aug 25, 2022, 9:30 PM IST

ಪ್ರತಿಪಕ್ಷವಾಗಿ ಧ್ವನಿ ಎತ್ತೋದೆ ತಪ್ಪಾ? : ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರು ಕಮಿಷನ್‌ ಕೊಡಬೇಕಾದ ಪರಿಸ್ಥಿತಿ ಇರುವುದು ನಿಜ. ಪ್ರತಿಪಕ್ಷವಾಗಿ ನಾವು ಧ್ವನಿ ಎತ್ತುವುದು ತಪ್ಪಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವುದು ಹೊಸತೇನಲ್ಲ. ಚಾಮರಾಜನಗರ ರೈತ ಸಂಘದವರು, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರ ವಿಚಾರವಾಗಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನನಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕಳೆದ ಒಂದು ವರ್ಷದಿಂದ ನನ್ನನ್ನಾಗಲಿ, ಸಿದ್ದರಾಮಯ್ಯ ಅವರನ್ನಾಗಲಿ ಭೇಟಿ ಮಾಡಿರಲಿಲ್ಲ. ಆದರೆ ಬುಧವಾರ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ತಿಂಗಳ ಹಿಂದೆ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಕೆಂಪಣ್ಣ ಅವರು ಕಾಂಗ್ರೆಸ್‌ ಏಜೆಂಟರಾಗಿದ್ದರೆ ಮುಖ್ಯಮಂತ್ರಿಯವರು ಅವರನ್ನು ಭೇಟಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.

ಆಪ್ತನಿಗೆ ನೋಟಿಸ್‌ :

ಡಿ.ಕೆ.ಶಿವಕುಮಾರ್‌ ಆಪ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್‌ ಮುಳಗುಂದ್‌ ಅವರಿಗೆ ಸಿಬಿಐ ನೋಟಿಸ್‌ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಸಂಬಂಧ ಗಂಗಾನಗರದ ಕಚೇರಿಗೆ ದಾಖಲೆಗಳೊಂದಿಗೆ ಆ.30 ರಂದು ಬರುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಮುಳುಗುಂದ್‌ಗೆ ನೋಟಿಸ್‌ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, ಅವರು ಪಕ್ಷದ ಕಾರ್ಯದರ್ಶಿ, ನನ್ನ ಆಪ್ತ. ಅವರೊಬ್ಬರಿಗೆ ಮಾತ್ರ ನೀಡಿಲ್ಲ. ನನ್ನ ಜತೆ ವ್ಯಾಪಾರ ವಹಿವಾಟು ಮಾಡಿರುವ, ಆಪ್ತರ ಪೈಕಿ 70-80 ಜನರಿಗೆ ನೀಡಿದ್ದಾರೆ. ನಾನು ಇದನ್ನು ಕಾನೂನು ಪ್ರಕಾರ ಎದುರಿಸಬೇಕು ಎಂದು ಮೌನವಾಗಿದ್ದೇನೆ. ಈ ಪ್ರಕರಣಗಳ ವಿರುದ್ಧ ಹೈಕೋರ್ಟ್‌ ನಲ್ಲಿ ಅರ್ಜಿ ಹಾಕಿದ್ದೇನೆ ಎಂದು ಹೇಳಿದರು.

ಬಿಜೆಪಿಯವರು  ಜನೋತ್ಸವ ಆಚರಣೆ ಮಾಡುತ್ತಿದ್ದು,ನಾವು ಕೂಡ ಅವರ ಭ್ರಷ್ಟೋತ್ಸವವನ್ನು ಆಚರಿಸುತ್ತೇವೆ. ಗುತ್ತಿಗೆದಾರರು ಸರ್ಕಾರದ ಭ್ರಷ್ಟಾಚಾರ, ಕಿರುಕುಳ ವಿಚಾರ ತಿಳಿಸಿದಾಗ ವಿರೋಧ ಪಕ್ಷವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ನಾವು ಈ ರಾಜ್ಯದ ಅಭಿವೃದ್ಧಿ ಪರ ಇರಬೇಕಲ್ಲವೆ ಎಂದರು.

ಪೊಲೀಸ್‌ ಇಲಾಖೆ ನೇಮಕಾತಿ ಅಕ್ರಮ ನಂತರ ಈಗ ಕೆಪಿಟಿಸಿಎಲ್‌ ನೇಮಕಾತಿ ಅಕ್ರಮ ಹೊರಬರುತ್ತಿದೆ. ಶಿಕ್ಷಣ ಇಲಾಖೆ ಅಕ್ರಮವೂ ಹೊರಬರುತ್ತಿದೆ. ಪೊಲೀಸ್‌ ನೇಮಕಾತಿ ಅಕ್ರಮದಲ್ಲಿ ಬಂಧಿತರ ಹೇಳಿಕೆಗಳನ್ನು ಯಾಕೆ ಬಿಡುಗಡೆ ಮಾಡುತ್ತಿಲ್ಲ. ಕೇವಲ ಕೆಲವು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳನ್ನು ಮಾತ್ರ ಬಲಿ ಪಡೆಯುತ್ತಿದ್ದಾರೆ. ಈ ಅಕ್ರಮಕ್ಕೆ ಕುಮ್ಮಕ್ಕು ನೀಡಿರುವ ಮಂತ್ರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯ ಶಾಸಕರು ಮಂತ್ರಿಗಳ ಅಕ್ರಮ ಆಸ್ತಿಗಳನ್ನು ತೆಗೆಯಲಿ. ಅವರ ಆಸ್ತಿ ಎಷ್ಟಿತ್ತು, ಅವರ ಮಕ್ಕಳು, ಕಂಪನಿಗಳ ಆಸ್ತಿ ಎಷ್ಟಾಗಿದೆ ಎಂದು ತನಿಖೆ ಮಾಡಿಸಲಿ. ನನ್ನ ಬಳಿಯು ಮಾಹಿತಿ ಇದೆ. ಸಮಯ ಬರಲಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.