ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಿದರೆ ಶಿಸ್ತು ಕ್ರಮ


Team Udayavani, Aug 26, 2022, 5:12 PM IST

14price

ಯಾದಗಿರಿ: ರೈತರಿಂದ ಬೇಡಿಕೆ ಇಲ್ಲದೆ ಇರುವ ರಸಗೊಬ್ಬರ ಒತ್ತಾಯಪೂರ್ವಕವಾಗಿ ಮತ್ತು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌. ಎಚ್ಚರಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರ ಸಮಸ್ಯೆಗಳ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ರಸಗೊಬ್ಬರಗಳ ಜೊತೆಗೆ ಲಘು ಪೋಷಕಾಂಶಗಳನ್ನು ನೀಡುತ್ತಿದ್ದರೆ ಬೆಳೆಗಳ ಮೇಲೆ ಅವುಗಳ ಪರಿಣಾಮ ಮತ್ತು ಮಹತ್ವಗಳ ಕುರಿತು ಹೆಚ್ಚಿನ ಪ್ರಚಾರ, ತರಬೇತಿ ಹಾಗೂ ಪ್ರಾತ್ಯಕ್ಷಿಕೆಗಳನ್ನು ಕೈಗೊಂಡು ಅದರ ವರದಿ ಸಲ್ಲಿಸಿದ ನಂತರವೇ ರೈತರಿಗೆ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.

ಯೂರಿಯಾ ರಸಗೊಬ್ಬರಕ್ಕೆ ವಿಧಿಸುತ್ತಿರುವ ಹೆಚ್ಚಿನ ಸಾರಿಗೆ ವೆಚ್ಚ ಕುರಿತು ಸಭೆಯಲ್ಲಿದ್ದ ಉತ್ಪಾದನಾ ಸಂಸ್ಥೆ ಪ್ರತಿನಿಧಿಗಳಿಂದ ಮಾಹಿತಿ ಪಡೆದು, ಯೂರಿಯಾ ರಸಗೊಬ್ಬರವನ್ನು ಸ್ವತಃ ಉತ್ಪಾದನೆ ಮಾಡಿ ಮಾರಾಟ ಮಾಡುತ್ತಿರುವ ಸಂಸ್ಥೆಯವರು ಯಾವುದೇ ಹೆಚ್ಚುವರಿ ಸಾರಿಗೆ ವೆಚ್ಚ ವಿಧಿಸುತ್ತಿಲ್ಲ. ಆದರೆ ಹೊರ ರಾಷ್ಟ್ರಗಳಿಂದ ಆಮದು ಮಾಡಿಕೊಂಡ ಯೂರಿಯಾ ರಸಗೊಬ್ಬರಕ್ಕೆ ಮಾತ್ರ ಹೆಚ್ಚುವರಿ ಸಾರಿಗೆ ವೆಚ್ಚ ವಿಧಿಸಲಾಗುತ್ತಿದೆ. ಇದು ಸರ್ಕಾರದ ಮಾರ್ಗಸೂಚಿ ಇರುವುದರಿಂದ ಎಲ್ಲ ವಿತರಕರು ಸಹಕರಿಸಬೇಕು ಎಂದರು.

ರಸಗೊಬ್ಬರ ಸರಬರಾಜು ಸಾರಿಗೆ ಸಂಸ್ಥೆಯವರು ನಿಗದಿತ ನಮೂನೆಯಲ್ಲಿ ಜಿಎಸ್‌ಟಿ ಬಿಲ್‌ ನೀಡದೆ ಇರುವ ಕುರಿತು ಸಭೆಯಲ್ಲಿದ್ದ ಸಾರಿಗೆ ಪ್ರತಿನಿಧಿ ಮತ್ತು ಸಹಾಯಕ ಆಯುಕ್ತರು ಆದಾಯ ತೆರಿಗೆ ಅವರೊಂದಿಗೆ ಚರ್ಚಿಸಿ ಇಲ್ಲಿಯವರೆಗೆ ನೀಡಿರುವ ಮತ್ತು ಮುಂದೆ ಬರುವ ರಸಗೊಬ್ಬರ ರಸೀದಿಯನ್ನು ಜಿಎಸ್‌ಟಿ ನಿಗದಿತ ನಮೂನೆಯಲ್ಲಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.

ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಇವರಲ್ಲಿರುವ ಕಾಪು ದಾಸ್ತಾನು ಪಡೆದಂತ ವಿತರಕರಿಗೆ ಎರಡನೇ ಹಂತದ ಸಾರಿಗೆ ವೆಚ್ಚವನ್ನು ಮಾರ್ಗಸೂಚಿಯನ್ವಯ ಕೇವಲ ಸಹಕಾರ ಸಂಘಗಳಿಗೆ ಮಾತ್ರ ನೀಡಲು ಅವಕಾಶವಿರುತ್ತದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ನಕಲಿ ರಸಗೊಬ್ಬರ ಬೀಜಗಳ ಹಾವಳಿ ಹೆಚ್ಚಾಗಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಜಾಲದ ಮೂಲವನ್ನು ಪತ್ತೆಹಚ್ಚಲು ಸಭೆಯಲ್ಲಿದ್ದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕ ಅಬಿದ್‌ ಎಸ್‌., ಜಿಪಂ ಯೋಜನಾ ನಿರ್ದೇಶಕ ವೆಂಕಟೇಶ ಚಟ್ನಳ್ಳಿ, ಯಾದಗಿರಿ ಡಿವೈಎಸ್‌ಪಿ ಬಸವೇಶ್ವರ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಬಿ.ಜಿ. ಚಿಮ್ಮಲಗಿ, ಕೃಷಿ ಇಲಾಖೆ ತಾಂತ್ರಿಕ ಸಲಹೆಗಾರ ರಾಜಕುಮಾರ, ಕೃಷಿ ಪರಿಕರ ಮಾರಾಟಗಾರ ಸಂಘದ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷರು ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.