ಗೃಹಸಚಿವ ಆರಗ ವಿರುದ್ಧ ಲೋಕಾಯುಕ್ತದಲ್ಲಿ ದೂರು: ರಾಜೀನಾಮೆಗೆ ಎಎಪಿ ಆಗ್ರಹ


Team Udayavani, Aug 26, 2022, 5:54 PM IST

araga

ಬೆಂಗಳೂರು ‌: ಜಿ ಕೆಟಗರಿ ಸೈಟು ಹಂಚಿಕೆ  ನಿಷೇಧಗೊಳಿಸಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗವನ್ನು ಹುಡುಕಿಕೊಂಡು ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಎಎಪಿ ರಾಜೀನಾಮೆಗೆ ಆಗ್ರಹಿಸಿದೆ.

ಕಳೆದ 4ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ವಿಫಲರಾಗಿರುವ ಬಿಜೆಪಿ ಸರ್ಕಾರ  ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಈ ರೀತಿಯ  ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು  ಹಂಚಿಕೆ ಮಾಡುವ ಪರಿ 40 %ಕಮಿಷನ್ ಬಿಜೆಪಿ  ಸರ್ಕಾರದ ಮತ್ತೊಂದು ರೂಪವಾಗಿದೆ ಎಂದು ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ  ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸುಪ್ರೀಂಕೋರ್ಟ್ 2021 ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ₹ ಬೆಲೆ ಬಾಳುವ ಆರ್ ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರು ಗಳಿಗೆ ಸೈಟು  ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತು ಈ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು  ಎಂದು ಮೋಹನ್ ದಾಸರಿ ವಿಷಾದ ವ್ಯಕ್ತಪಡಿಸಿದರು.

ಉಂಡೂ ಹೋದ ಕೊಂಡೂ ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಅರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ.

ಈ ಕೂಡಲೇ ಅರಗ ಜ್ಞಾನೇಂದ್ರ ರನ್ನು  ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ  ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.  ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾದ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.

ಟಾಪ್ ನ್ಯೂಸ್

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.