ಕಬ್ಬಿಣದ ಅದಿರು ಉತ್ಪಾದನೆ ಮಿತಿ ಹೆಚ್ಚಳ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಅನ್ವಯ
Team Udayavani, Aug 27, 2022, 7:15 AM IST
ನವದೆಹಲಿ: ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಉತ್ಪಾದನೆಯ ಮಿತಿಯನ್ನು ಹೆಚ್ಚಳ ಮಾಡಿ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಆದರೆ, ಆರ್ಥಿಕ ಅಭಿವೃದ್ಧಿಯ ಉದ್ದೇಶದ ಜೊತೆ ಜೊತೆಗೇ ಪರಿಸರ ಮತ್ತು ಜೀವವೈವಿಧ್ಯದ ಸಂರಕ್ಷಣೆಗೂ ಆದ್ಯತೆ ನೀಡಬೇಕು ಎಂಬ ಕಟ್ಟಪ್ಪಣೆಯನ್ನೂ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ವಿಧಿಸಿದೆ.
ಕಬ್ಬಿಣದ ಅದಿರಿನ ಉತ್ಪಾದನೆಗೆ ಹೇರಿರುವ ಮಿತಿಯನ್ನು ರದ್ದು ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, “ಬಳ್ಳಾರಿ ಜಿಲ್ಲೆಯಲ್ಲಿ ಉತ್ಪಾದನೆ ಮಿತಿಯನ್ನು ಸದ್ಯ ಇರುವ 28 ದಶಲಕ್ಷ ಮೆಟ್ರಿಕ್ ಟನ್‌ನಿಂದ 35 ದಶಲಕ್ಷ ಮೆಟ್ರಿಕ್ ಟನ್‌ಗೆ, ಅದೇ ರೀತಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉತ್ಪಾದನೆ ಮಿತಿಯನ್ನು 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸುತ್ತಿದ್ದೇವೆ’ ಎಂದು ಘೋಷಿಸಿದೆ.
ಜತೆಗೆ, “ಆರ್ಥಿಕ ಅಭಿವೃದ್ಧಿ ಎಷ್ಟು ಮುಖ್ಯವೋ ಜೀವವೈವಿಧ್ಯ, ಪರಿಸರದ ಸಂರಕ್ಷಣೆಯೂ ಅಷ್ಟೇ ಮುಖ್ಯ. ಹೀಗಾಗಿ ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಿ’ ಎಂದೂ ಸೂಚಿಸಿದೆ. ಈ ಬಗ್ಗೆ ಇತರ ರಾಜ್ಯಗಳಲ್ಲಿ ಅನುಸರಿಸಲಾಗಿದ್ದ ನಿಯಮಗಳನ್ನೂ ಕೂಡ ನ್ಯಾಯಪೀಠ ಅನುಸರಿಸಿದೆ.
ಪ್ರಕರಣ ಸಂಬಂಧ ಮೇ 20ರಂದು ನೀಡಿದ್ದ ಆದೇಶದಲ್ಲಿ ಸುಪ್ರೀಂ ಕೋರ್ಟ್, ಕರ್ನಾಟಕದ 3 ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ಸಂಬಂಧಿಸಿದ ಕೆಲವೊಂದು ಕ್ರಮಗಳನ್ನು ಸಡಿಲಿಕೆ ಮಾಡಿತ್ತು. ಆದರೆ, ಉತ್ಪಾದನೆಗೆ ವಿಧಿಸಲಾಗಿದ್ದ ಮಿತಿಯ ಕುರಿತು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಕೇಂದ್ರೀಯ ಉನ್ನತಾಧಿಕಾರದ ಸಮಿತಿ (ಸಿಇಸಿ) ಕೂಡ ಮೂರೂ ಜಿಲ್ಲೆಗಳಲ್ಲಿ ಅದಿರು ಉತ್ಪಾದನೆಯ ಮಿತಿಯನ್ನು ಹೆಚ್ಚಿಸುವ ಬಗ್ಗೆ ಸಹಮತ ವ್ಯಕ್ತಪಡಿಸಿತ್ತು.
ಸಂಪೂರ್ಣ ಸಡಿಲಿಕೆಗೆ ನಕಾರ
ಅದಿರು ಉತ್ಪಾದನೆಗೆ ಹೇರಿರುವ ಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಕೋರ್ಟ್‌ನಿಂದ ನೇಮಕಗೊಂಡಿದ್ದ ಕೇಂದ್ರೀಯ ಉನ್ನತಾಧಿಕಾರ ಸಮಿತಿ(ಸಿಇಸಿ) ಮಾಡಿದ ಶಿಫಾರಸನ್ನು ಸುಪ್ರೀಂ ತಿರಸ್ಕರಿಸಿದೆ.
ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ನಾವು ಒಪ್ಪುತ್ತೇವೆ. ಹಾಗಂತ ಮಿತಿಯನ್ನು ಸಂಪೂರ್ಣ ತೆಗೆದುಹಾಕಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ನಾವು ಎಚ್ಚರಿಕೆಯ ಹೆಜ್ಜೆ ಇಡಬೇಕಾಗುತ್ತದೆ ಎಂದಿದೆ. ಉತ್ಪಾದನೆಗಿರುವ ಮಿತಿಯನ್ನು ರದ್ದು ಮಾಡುವುದರಿಂದ ರಾಜ್ಯದಲ್ಲಿ ಅನಿಯಂತ್ರಿತ ಗಣಿಗಾರಿಕೆ ಆರಂಭವಾಗಿ, ಮತ್ತೆ ಹಿಂದಿನ ಪರಿಸ್ಥಿತಿಗೆ ಮರಳಬೇಕಾಗಬಹುದು ಎಂದು ಎನ್‌ಜಿಒ ಸಮಾಜ ಪರಿವರ್ತನ ಸಮುದಾಯವು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನ್ಯಾಯಪೀಠ ಈ ನಿರ್ಧಾರ ಕೈಗೊಂಡಿತು.
ಎಲ್ಲಿ, ಎಷ್ಟು ಹೆಚ್ಚಳ?
ಬಳ್ಳಾರಿ- 28 ಎಂಎಂಟಿಯಿಂದ 35 ಎಂಎಂಟಿಗೆಚಿತ್ರದುರ್ಗ ಮತ್ತು ತುಮಕೂರು- 7 ಎಂಎಂಟಿಯಿಂದ 15 ಎಂಎಂಟಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.