89.04 ಮೀ. ಜಾವೆಲಿನ್ ಎಸೆತ : ಡೈಮಂಡ್ ಲೀಗ್ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಡೈಮಂಡ್ ಲೀಗ್ ಫೈನಲ್‌ಗೆ ನೀರಜ್ ಅರ್ಹತೆ
Team Udayavani, Aug 27, 2022, 10:34 AM IST
ಲಾಸನ್ : ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್ ನಲ್ಲಿ ಅಗ್ರಸ್ಥಾನಿಯಾಗಿ ಹೊರಹೊಮ್ಮುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಲಾಸನ್‌ನಲ್ಲಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್ 89.04 ಮೀ. ಎಸೆಯುವ ಮೂಲಕ ಮೊದಲ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಈ ವಿಶೇಷ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೂ ನೀರಜ್ ಪಾತ್ರರಾಗಿದ್ದಾರೆ.
ಈ ಜಯದೊಂದಿಗೆ ಮುಂದಿನ ತಿಂಗಳು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ.
ನೀರಜ್ ಚೋಪ್ರಾ ತನ್ನ ಮೊದಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಅದರಂತೆ ಜೇಕಬ್ ವಾಡ್ಲೆಚ್ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್ ಥಾಂಪ್ಸನ್ (83.72 ಮೀ.) ಮೂರನೇ ಸ್ಥಾನ ಗಳಿಸಿದರು.
ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಬಳಿಕ ಗಾಯಕ್ಕೆ ತುತ್ತಾಗಿದ್ದ ನೀರಜ್ ಕಾಮನ್ವೆಲ್ತ್ ಗೇಮ್ಸ್ನಿಂದ ಹೊರಗುಳಿಯ ಬೇಕಾಯಿತು. ಇದೀಗ ಡೈಮಂಡ್ ಲೀಗ್ನಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.
HE’S DONE IT!??
IIS athlete #NeerajChopra becomes the FIRST EVER Indian to win at the Diamond League, finishing top of the pile at the #LausanneDL with a MASSIVE throw of 89.08m in his very first attempt⚡️
He qualifies for the Diamond League final, in Zurich. #CraftingVictories pic.twitter.com/zbxbqrlWnD
— Inspire Institute of Sport (@IIS_Vijayanagar) August 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.